March 14, 2026

Newsnap Kannada

The World at your finger tips!

leelavathi

ಹಿರಿಯ ನಟಿ ಲೀಲಾವತಿ ಬಚ್ಚಲು ಮನೆಯಲ್ಲಿ ಬಿದ್ದು ಗಾಯ‌

Spread the love

ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಬಚ್ಚಲು ಮನೆಯಲ್ಲಿ ಕಾಲು ಜಾರಿಬಿದ್ದು ಸೊಂಟ ಮತ್ತು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ.

ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಪುತ್ರ ವಿನೋದ್ ರಾಜ್ ಜೊತೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ಲೀಲಾವತಿ ಅವರಿಗೆ ವೈದ್ಯರು ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ವಿನೋದ್ ರಾಜ್ ಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ.

ಸುಮಾರು ಒಂದು ಅರ್ಧ- ಮುಕ್ಕಾಲು ಗಂಟೆ ಒದ್ದಾಡಿದ್ದಾರೆ. ಜೋರಾಗಿ ಕೂಗಿ ಯಾರನ್ನಾದರೂ ಕರೆಯಲೂ ಸಾಧ್ಯವಾಗಿಲ್ಲ. ನಂತರ ಸಾವರಿಸಿಕೊಂಡ ಬಾಗಿಲು ತೆರದಿದ್ದಾರೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

error: Content is protected !!