ಬಹುಭಾಷಾ ಹಿರಿಯ ನಟಿಯ ಮನೆ ಸೇರಿ ಹಲವು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ.
ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು ಖದೀಮರು ಮನೆಯಲ್ಲಿದ್ದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಮಂಡ್ಯದ ಯುವಕ ಆತ್ಮಹತ್ಯೆಗೆ ಶರಣು
ದೀಪಾವಳಿ ಹಬ್ಬಕ್ಕೆ ಕುಟುಂಬ ಸಮೇತರಾಗಿ ಹಿರಿಯ ನಟಿ ವಿನಯ ಪ್ರಸಾದ್ ಅವರು, ತಮ್ಮ ಹುಟ್ಟೂರು ಉಡುಪಿಗೆ ಹೋಗಿದ್ದರು. ಊರಿಗೆ ಹೋಗಿರುವುದನ್ನು ಗಮನಿಸಿದ ಕಳ್ಳರು ದೀಪಾವಳಿ ಹಬ್ಬದ ದಿನ ಮನೆ ಬೀಗ ಮುರಿದು 7 ಸಾವಿರ ರೂಪಾಯಿ ನಗದು ದೋಚಿಕೊಂಡು ಹೋಗಿದ್ದಾರೆ.
ವಿನಯ ಪ್ರಸಾದ್ ಕುಟುಂಬ ಹಬ್ಬ ಮುಗಿಸಿ ನಂದಿನಿ ಲೇಔಟ್‍ನಲ್ಲಿರುವ ತಮ್ಮ ಮನೆಗೆ ಬಂದಾಗ ಕಳ್ಳತನ ಆಗಿರುವ ವಿಚಾರ ಬೆಳಕಿಗೆ ಬಂದಿದೆ. ಕಳ್ಳತನ ಸಂಬಂಧ ಸದ್ಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಕಳ್ಳರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ದೀಪಾವಳಿ ಹಬ್ಬದ ದಿನವೇ ಉತ್ತರ ವಿಭಾಗದ ನಾಲ್ಕೈದು ಠಾಣಾ ವ್ಯಾಪ್ತಿಯಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ. ಜೆಸಿ ನಗರ, ಮಲ್ಲೇಶ್ವರಂ, ಸುಬ್ರಹ್ಮಣ್ಯನಗರ, ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ಖದೀಮರು ತಮ್ಮ ಕರಾಮತ್ತನ್ನು ತೋರಿಸಿದ್ದಾರೆ.
ಕಳ್ಳರು ಮನೆ ಮಾಲೀಕರು ಮನೆಯಲ್ಲಿ ಇಲ್ಲದೇ ಇರುವುದು ಮತ್ತು ದೀಪಾವಳಿ ಹಬ್ಬದಲ್ಲಿ ದೊಡ್ಡ ಮಟ್ಟದ ಪಟಾಕಿ ಹೊಡೆಯುವುದನ್ನೇ ಕಳ್ಳರು ಬಂಡವಾಳವಾನ್ನಾಗಿ ಮಾಡಿಕೊಂಡಿದ್ದಾರೆ. ಪಟಾಕಿ ಸದ್ದಿನ ನಡುವೆ ಮನೆಗಳ ಬೀಗ ಮುರಿಯುವ ಶಬ್ಧ ಆಚೇ ಬರದ ರೀತಿಯಲ್ಲಿ ನೋಡಿಕೊಂಡು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ