- ಆಸ್ತಿ ವಿವಾದ ಹಾಗೂ ಇತ್ತೀಚೆಗೆ ವಿಧಾನ ಪರಿಷತ್ ನಲ್ಲಿ ನಡೆದ ಘಟನೆ ಆತ್ಮಹತ್ಯೆ ಗೆ ಕಾರಣ
- ಡೆತ್ ನೋಟ್ ಬರೆದು ಇಟ್ಟು ಕೊಂಡೇ ಆತ್ಮಹತ್ಯೆ
- ಚಾಲಕನನ್ನು ಮನೆಗೆ ಕಳುಹಿಸಿದರು.
- ಶತಾಬ್ದಿ ರೈಲಿನ ಸಮಯವನ್ನು ಗೆಳೆಯೊಬ್ಬರ ಬಳಿ ವಿಚಾರಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ ಗೌಡರು. ರಾತ್ರಿಯೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸ್ಥಳಕ್ಕೆ ಭೇಟಿ.
ವಿಧಾನ ಪರಿಷನ್ ನ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ಗುಣಸಾಗರದ ಬಳಿ ನಿನ್ನೆ ಮಧ್ಯರಾತ್ರಿ ಜರುಗಿದೆ.
ಆಸ್ತಿ ವಿಚಾರ ಹಾಗೂ ಇತ್ತೀಚೆಗೆ ಪರಿಷತ್ ನಲ್ಲಿ ನಡೆದಿದ್ದ ಗಲಾಟೆಯಿಂದ ಧರ್ಮೇಗೌಡರು ಮನ ನೊಂದಿದ್ದರು ಎಂದು ಹೇಳಲಾಗುತ್ತದೆ. ವಿಚಾರಗಳನ್ನು ಅವರು ತಮ್ಮ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ಸಂಜೆ ಗುಣಸಾಗರಕ್ಕೆ ಆಗಮಿಸಿದ್ದರು:
ಎಸ್.ಎಲ್ ಧರ್ಮೇಗೌಡ ನಿನ್ನೆ ಸಂಜೆ 6.30ರ ಸುಮಾರಿಗೆ ಗುಣಸಾಗರಕ್ಕೆ ಆಗಮಿಸಿದ್ದರು. ಸಖರಾಯಪಟ್ಟಣದ ಮನೆಯಿಂದ ಚಾಲಕನ ಜೊತೆ ಕಾರಿನಲ್ಲಿ ಬಂದಿದ್ದ ಧರ್ಮೇಗೌಡ, ರೈಲ್ವೆ ಟ್ರ್ಯಾಕ್ ಬಳಿ ಕಾರನ್ನು ನಿಲ್ಲಿಸುವಂತೆ ಹೇಳಿದ್ದರು.
ಇತ್ತ ರೈಲ್ವೆ ಹಳಿ ಬರುವಾಗ ಹಳ್ಳಿಗರನ್ನು ಮಾತನಾಡಿಸಿ ಬಂದಿದ್ದರು. ಅಲ್ಲದೆ ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಅಂತ ಚಾಲಕನನ್ನು ಕಳುಹಿಸಿದ್ದಾರೆ.
ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ನಂತರ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಛಿಧ್ರವಾಗಿದ್ದ ದೇಹ :
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಂದ ರೈಲಿಗೆ ತಲೆಕೊಟ್ಟು ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಧರ್ಮೇಗೌಡ ಅವರ ಮೃತದೇಹ ಛಿದ್ರಗೊಂಡಿದೆ ಸುಮಾರು 100 ಮೀಟರ್ ದೂರದಲ್ಲಿ ಕೈ ಪತ್ತೆಯಾಗಿದೆ.
ಪರಿಷತ್‍ನಲ್ಲಿ ನಡೆದ ಗಲಾಟೆಯಿಂದ ಮನಸ್ಸಿಗೆ ನೋವಾಗಿದೆ. ಮನೆಯಲ್ಲಿನ ಆಸ್ತಿ ವಿಚಾರ, ಹಣಕಾಸು ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ. ಅಲ್ಲದೆ ಪತ್ನಿ ಮಮತಾ, ಮಗ, ಮಗಳಲ್ಲಿ ಕ್ಷಮೆ ಕೂಡ ಕೇಳಿದ್ದಾರೆ.
ಧರ್ಮೇಗೌಡರು ಸಜ್ಜನ ರಾಜಕಾರಣಿ ಯಾಗಿದ್ದರು. ಗೌಡರ ಅಕಾಲಿಕ ನಿಧನಕ್ಕೆ ಮುಖ್ಯ ಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ