ಉಪರಾಷ್ಟ್ರಪತಿ ಚುನಾವಣೆ: BJP ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಣಕ್ಕೆ ?

Team Newsnap
1 Min Read
There is no discussion about Lok Sabha election contest: Jagdish Shettar ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್​ ಶೆಟ್ಟರ್​

ಉಪರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯಾಗಿ ಕರ್ನಾಟಕದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರು ಮುಂಚೂಣಿಯಲ್ಲಿದೆ.ಇಂದು ಸಂಜೆ ದೆಹಲಿಯಲ್ಲಿ ಬಿಜೆಪಿಯ ಸಂಸದೀಯ ಮಂಡಳಿ ಸಭೆಯನ್ನು ನಿಗದಿ ಪಡಿಸಲಾಗಿದೆ.

ಈ ಸಭೆಯಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಠಿಯಿಂದ ಉಪ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಕರ್ನಾಟಕದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸೋ ಚರ್ಚೆ ಬಿಜೆಪಿ ಪಾಳಯದಲ್ಲಿ ನಡೆದಿದೆ ಎನ್ನಲಾಗಿದೆ.ಇದನ್ನು ಓದಿ –ಸನ್ನಡತೆ ಆಧಾರ : 84 ಕೈದಿಗಳ ಬಿಡುಗಡೆ : ಸಚಿವ ಅರಗ ಜ್ಞಾನೇಂದ್ರ

ರಾಜ್ಯದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರು ಉಪ ರಾಷ್ಟ್ರಪತಿ ಅಭ್ಯರ್ಥಿಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಇವರೊಂದಿಗೆ ಮುಖ್ತಾರ್ ಅಬ್ಬಬಾಸ್ ನಖ್ವಿ, ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಹೆಸರುಗಳು ಕೇಳಿ ಬರುತ್ತಿದೆ. ಮುಂಚೂಣಿ ರೇಸ್ ನಲ್ಲಿ ಜಗದೀಶ್ ಶೆಟ್ಟರ್ ಹೆಸರಿದ್ದು, ಅವರಿಗೆ ಉಪ ರಾಷ್ಟ್ರಪತಿ ಹುದ್ದೆಗೆ ಏರಲಿದ್ದಾರಾ ಎಂಬುದೇ ಕುತೂಹಲ . ಆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಉಪರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಆ.6ರಂದು ಮತದಾನ ನಡೆದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

Share This Article
Leave a comment