ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ ತಿಂಗಳಿನಲ್ಲಿ ಕೊನೆಗೊಳ್ಳಲಿದೆ. ಉಪಾಧ್ಯಕ್ಷರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಾರೆ. ಆಗಸ್ಟ್ 6ರಂದೇ ಉಪ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕೂಡ ನಡೆಯಲಿದೆ.
ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಲು ಜುಲೈ 17 ಕೊನೆಯ ದಿನಾಂಕ ಎಂದು ಅಧೀಕೃತ ಮಾಹಿತಿಯನ್ನು ಚುನಾವಣಾ ಆಯೋಗ ತಿಳಿಸಿದೆ.
ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಉಮೇದುವಾರಿಕೆ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.
ಉಪ ರಾಷ್ಟ್ರಪತಿ ಚುನಾವಣೆಯ ಮುಖ್ಯಾಂಶಗಳು:
ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ , ಅದೇ ದಿನ ಮತ ಎಣಿಕೆ ನಡೆಯಲಿದೆ.
ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪಾಧ್ಯಕ್ಷರ ಚುನಾವಣೆಗಾಗಿ ಎಲೆಕ್ಟೋರಲ್ ಕಾಲೇಜ್ನ್ನು ರಚಿಸುತ್ತಾರೆ.
ವೆಂಕಯ್ಯ ನಾಯ್ಡು ಅವರ ಉಪರಾಷ್ಟ್ರಪತಿ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.
ಅಭ್ಯರ್ಥಿಗಳು ಬಹಿರಂಗವಾಗಿಲ್ಲ :
ಇದುವರೆಗೆ ವೆಂಕಯ್ಯ ನಾಯ್ಡು ಅವರ ನಂತರ ಭಾರತದ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಸುಳಿವು ಯಾವುದೇ ಪಕ್ಷದಿಂದಲೂ ಹೊರಬಿದ್ದಿಲ್ಲ. ಯಾವುದೇ ರಾಜಕೀಯ ಪಕ್ಷಗಳೂ ತಮ್ಮ ಅಭ್ಯರ್ಥಿಗಳ ಕುರಿತು ಸುಳಿವು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಮುಂದಿನ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ