ದೆಹಲಿ:ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಕುಸ್ತಿ ಪಟು ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
ವಿನೇಶ್ ಫೋಗಟ್ ಮತ್ತು ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಆರಂಭಿಕ ಹಂತದಲ್ಲಿ ಫೋಗಟ್ ಮುನ್ನಡೆ ಸಾಧಿಸಿದರು. ಮಧ್ಯದಲ್ಲಿ ಯೋಗೇಶ್ ಕುಮಾರ್ ಮುನ್ನಡೆಗೆ ಬಂದರೂ, ಅಂತಿಮ ಸುತ್ತಿನಲ್ಲಿ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆದು, ವಿನೇಶ್ ಫೋಗಟ್ ಅವರ ವಿಜಯ ಸಾಧನೆಗೆ ಕಾರಣವಾಯಿತು. ಈ ಜಯದಿಂದ ವಿನೇಶ್ ಫೋಗಟ್ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದು, ವಿಧಾನಸಭೆಗೆ ಪ್ರವೇಶಿಸಿದ್ದಾರೆ.
ಹರ್ಯಾಣ ಚುನಾವಣೆಯಲ್ಲಿ, “ಕಿಸಾನ್, ಜವಾನ್, ಪೈಲ್ವಾನ್” ಎಂಬ ಘೋಷವಾಕ್ಯವನ್ನು ಕಾಂಗ್ರೆಸ್ ಅಳವಡಿಸಿಕೊಂಡು ತಮ್ಮ ಪ್ರಚಾರ ಮುನ್ನಡೆಸಿತ್ತು.ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಆಘಾತ, ಬಹುಮತದತ್ತ ಬಿಜೆಪಿ ಮುನ್ನಡೆ
ಮತ ಎಣಿಕೆಯ ಆರಂಭದ ಸುತ್ತುಗಳಲ್ಲಿ ಕಾಂಗ್ರೆಸ್ ಹರ್ಯಾಣದಲ್ಲಿ ಮುನ್ನಡೆ ಹೊಂದಿತ್ತು. ಆದರೆ, ಮಧ್ಯಾಹ್ನ ವೇಳೆಗೆ ಬಿಜೆಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ, ಹಾಗೂ ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದಾಗಿ ವರದಿಯಾಗಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ