ವಿಧಾನಪರಿಷತ್ ಉಪ ಚುನಾವಣೆ: ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಸ್ಪರ್ಧೆ

chichnasuru

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಪರಿಷತ್ ಮಾಜಿ ಸದಸ್ಯ ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ವಿಧಾನಪರಿಷತ್ ಗೆ ಉಪ ಚುನಾವಣೆ ಘೋಷಣೆಯಾಗಿದೆ . ಈ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಿದೆ.

ಈ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಫೈನಲ್ ಮಾಡಿದೆ. ಕೋಲಿ ಸಮುದಾಯದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ನೀಡಿದೆ.

ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಪರಿಷತ್ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿತ್ತು.

ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಮಾರ್ಚ್ 31, 2022ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅವಧಿ ಜೂನ್ 17, 2024 ಅಂತ್ಯವಾಗುತ್ತಿತ್ತು

ಜುಲೈ 25ರ ಅಧಿಸೂಚನೆಯಂತೆ 1-08-2022 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನಾಮಪತ್ರಗಳ ಪರಿಶೀಲನೆ ದಿನಾಂಕ 02-08-2022ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ದಿನಾಂಕ 04-08-2022 ಆಗಿದೆ. ದಿನಾಂಕ 11-08-2022ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಈ ಬಳಿಕ ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

Leave a comment

Leave a Reply

Your email address will not be published. Required fields are marked *

error: Content is protected !!