December 19, 2024

Newsnap Kannada

The World at your finger tips!

ekection,politics,Congress

ಅಬ್ದುಲ್ ಜಬ್ಬಾರ್ , ನಾಗರಾಜ್ ಯಾದವ್ ಗೆ ಕಾಂಗ್ರೆಸ್ ಟಿಕೆಟ್

ವಿಧಾನ ಪರಿಷತ್ ಚುನಾವಣೆ : ಅಬ್ದುಲ್ ಜಬ್ಬಾರ್ , ನಾಗರಾಜ್ ಯಾದವ್ ಗೆ ಕಾಂಗ್ರೆಸ್ ಟಿಕೆಟ್

Spread the love

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಹೈ ಕಮ್ಯಾಂಡ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗಾರಾಜ್ ಯಾದವ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

ಕಾಂಗ್ರೆಸ್‍ನ ಹಿರಿಯ ನಾಯಕರು ಟಿಕೆಟ್‍ಗಾಗಿ ಹೈಕಮಾಂಡ್ ಬಳಿ ಅಂಗಲಾಚಿದ್ದರು. ಆದರೆ ಹೈಕಮಾಂಡ್ ಪಕ್ಷ ನಿಷ್ಠರನ್ನು ಹುಡುಕಿ ಮಣೆ ಹಾಕಿದೆ.

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಲು ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ಆದರೆ ಹೈಕಮಾಂಡ್ ಯಾರ ಪ್ರಯತ್ನಕ್ಕೂ ಕೇರ್ ಮಾಡದೇ ತನ್ನದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಇದನ್ನು ಓದಿ –ಚಿಕ್ಕಬಳ್ಳಾಪುರದಲ್ಲಿ ಏಕಕಾಲದಲ್ಲೇ 2 ಕಡೆ ಭೂಕಂಪ- ಆತಂಕಗೊಂಡ ಜನ

ಜಾತಿ ಸಮೀಕರಣದಲ್ಲಿ ಯಾದವ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ನಾಗರಾಜ್ ಯಾದವ್‍ಗೆ ಅವಕಾಶ ನೀಡಿದೆ. ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಮೇಶ್ ಜಾರಕಿಹೊಳಿ ಬೆಂಬಲಿಗ ಸಹಾ ಆಗಿರುವ ನಾಗರಾಜ್ ಯಾದವ್‍ಗೆ ಅವಕಾಶ ಸಿಕ್ಕಿದೆ. ಯಾದವ್ ಯಾವುದೇ ಬಣದಲ್ಲಿ ಗುರುತಿಸಿಕೊಂಡಿಲ್ಲ.

ಈ ಹಿಂದೆ ಒಂದು ಬಾರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಪರಿಷತ್‍ಗೆ ನಾಮನಿರ್ದೇಶನಗೊಂಡಿದ್ದ ಅಬ್ದುಲ್ ಜಬ್ಬಾರ್‌ಗೆ ಹೈಕಮಾಂಡ್ ಮಣೆ ಹಾಕಿದೆ. ಪ್ರಸ್ತುತ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜಾಧ್ಯಕ್ಷರಾಗಿರುವ ಅಬ್ದುಲ್ ಜಬ್ಬಾರ್ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!