ವಿಧಾನ ಪರಿಷತ್ ಕಲಾಪವನ್ನು ಫೆ. 10 ರವರೆಗೆ ವಿಸ್ತರಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ನಿನ್ನೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ನೂತನ ಸಭಾಪತಿ ಆಯ್ಕೆ ನಡೆಯಲು ಅನುಕೂಲ ಆಗುವಂತೆ ಫೆ.10ರವರೆಗೆ ಪರಿಷತ್ ಕಲಾಪ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.
ಸೋಮವಾರ ಹೊರಟ್ಟಿ ನಾಮಪತ್ರ:
ಸಭಾಪತಿ ಆಯ್ಕೆ ಮಂಗಳವಾರ ಚುನಾವಣೆ ನಡೆಯಲಿದೆ. ಸೋಮವಾರ ಸಭಾಪತಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅಧಿಕೃತವಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.
ಪರಿಷತ್ ಕಲಾಪ ಮೂರು ದಿನಗಳ ಕಾಲ ವಿಸ್ತರಣೆ ಕುರಿತು ಕೈಗೊಂಡ ನಿರ್ಧಾರಗಳ ಬಗ್ಗೆ ರಾಜ್ಯಪಾಲರಿಗೆ ಸರ್ಕಾರ ವರದಿ ರವಾನಿಸಲಾಗಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ