Main News

‘ವಿದ್ಯಾಗಮ’ ತಾತ್ಕಾಲಿಕ ಸ್ಥಗಿತ: ಶಿಕ್ಷಣ ಸಚಿವರ ಘೋಷಣೆ

ವಿರೋಧ ಪಕ್ಷಗಳ ವಾಗ್ದಾಳಿ ಹಾಗೂ ಸಾರ್ವಜನಿಕರ ವಿರೋಧಕ್ಕೆ ನಡುಗಿದ ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿರುವ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿ,
ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ವಿದ್ಯಾಗಮ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಈ ಯೋಜನೆಯನ್ನು ಸ್ಥಗಿತಗೊಳಿಸಲು ಸೂಚಿಸಿದ್ದರು. ಸಿಎಂ ಆದೇಶದ ಮೇರೆಗೆ ಈ ಯೋಜನೆಯನ್ನು ಕೈಬಿಡಲಾಗಿದೆ. ಜಿಲ್ಲಾವಾರು ಅಂಶಗಳ ಸ್ವೀಕಾರ ಹಾಗೂ ಅದರ ಅಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ವಿದ್ಯಾಗಮ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು.

ಸೋಮವಾರದೊಳಗೆ ವಿದ್ಯಾಗಮ ಯೋಜನೆಯನ್ನು ಕೈಬಿಡದಿದ್ದರೆ ನನ್ನ ಜೀವ ಹೋದರೂ ಪರವಾಗಿಲ್ಲ. ಮಂಗಳವಾರದಿಂದ ಸರ್ಕಾರದ ಅನಾಗರಿಕ, ನಿರ್ಲಜ್ಜ ನೀತಿ, ನಿರ್ಧಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸುತ್ತೇನೆ ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಎಚ್ಚರಿಸಿದ್ದರು.

ಅದಾದ ಕೆಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಿ, ಆದೇಶ ಹೊರಡಿಸಿದೆ. ಶಿಕ್ಷಕರು ಹಾಗೂ ಪೋಷಕರಿಂದಲೂ ವಿದ್ಯಾಗಮ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.

Team Newsnap
Leave a Comment

View Comments

  • ಅಭಿಪ್ರಾಯಗಳಿಗೆ ಮಣಿಯದ ಸರ್ಕಾರ ಒತ್ತಡಕ್ಕೆ ಮಾತ್ರ ಬಗ್ಗುತ್ತದೆ ಎಂದು ಕಾಣುತ್ತದೆ.ಹಲವಾರು ದಿನಗಳಿಂದ ವಿದ್ಯಾಗಮ ಸ್ಥಗಿತಕ್ಕೆ ಪೋಷಕರು,ಶಿಕ್ಷಕರ ಅಭಿಪ್ರಾಯಗಳಿಗೆ ಮಾನ್ಯತೆ ನೀಡಿರಲಿಲ್ಲ.ಈಗಲಾದರೂ ಸರಿಯಾದ ನಿರ್ಧಾರ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆ
    - ಹೊಳಲು ಶ್ರೀಧರ್

Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024