January 29, 2026

Newsnap Kannada

The World at your finger tips!

meena vidya

ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ

Spread the love

ದಕ್ಷಿಣ ಭಾರತದ ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ವಿದ್ಯಾಸಾಗರ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ವಿದ್ಯಾಸಾಗರ್ ಕೆಲವು ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜನವರಿಯಲ್ಲಿ ಕುಟುಂಬ ಕೋವಿಡ್ 19 ಪರೀಕ್ಷೆ ನಡೆಸಿತ್ತು. ಈ ವೇಳೆ ಸೋಂಕು ಉಲ್ಬಣಗೊಂಡಿದ್ದರೂ ವಿದ್ಯಾಸಾಗರ್ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಆದರೆ ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ಹೀಗಾಗಿ ಕೆಲವು ವಾರಗಳ ಹಿಂದೆ ವಿದ್ಯಾಸಾಗರ್ ಅವರಿಗೆ ಶ್ವಾಸಕೋಶದ ಸೋಂಕಿನ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಆದರೆ ಕಸಿ ಮಾಡಿಸಿಕೊಳ್ಳಲು ದಾನಿಗಳು ಸರಿಯಾಗಿ ಸಿಗಲಿಲ್ಲ ಎಂದು ತಿಳಿದುಬಂದಿದೆ.

meena v

2009ರಲ್ಲಿ ನಟಿ ಮೀನಾ ಅವರು ಬೆಂಗಳೂರು ಮೂಲದ ವಿದ್ಯಾಸಾಗರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾ ಸಾಗರ್ ಸಾಫ್ಟ್ ವೇರ್ ಎಂಜಿನಿಯರ್ . ಮದುವೆಯ ನಂತರ ಈ ಜೋಡಿ ಚೆನ್ನೈನಲ್ಲಿ ನೆಲೆಸಿತ್ತು.

error: Content is protected !!