January 9, 2025

Newsnap Kannada

The World at your finger tips!

vijay

ಇಂಧನ ದರ ವಿರೋಧಿಸಿ ಸೈಕಲ್ ನಲ್ಲಿ ಬಂದು ಮತದಾನ ಮಾಡಿದ ಸೂಪರ್ ಸ್ಟಾರ್ ವಿಜಯ್

Spread the love

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸೂಪರ್ ಸ್ಟಾರ್ ವಿಜಯ್ ಮಾಸ್ಕ್ ಧರಿಸಿಕೊಂಡು ಸೈಕಲ್‍ನಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಿ‌ ಗಮನ ಸೆಳೆದರು.

ನಟ ವಿಜಯ್ ಸೈಕಲ್‍ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್ ಮತಗಟ್ಟೆಗೆ ಬಂದಿದ್ದಾರೆ.

ಈ ವೇಳೆ ಅಭಿಮಾನಿಗಳು ವಿಜಯ್ ಜೊತೆಯಲ್ಲಿ ಫೋಟೋ ಮತ್ತು ವೀಡಿಯೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಅಭಿಮಾನಿಗಳು ರಸ್ತೆ ಮಧ್ಯದಲ್ಲಿ ಸುತ್ತವರಿದ ಕಾರಣ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ವಿಜಯ್ ತಮ್ಮ ಸಿಬ್ಬಂದಿಯ ದ್ವಿಚಕ್ರವಾಹನದಲ್ಲಿ ಹಿಂದೆ ಕುಳಿತು ಮತಗಟ್ಟೆಗೆ ಹೋಗಿದ್ದಾರೆ.

ಮತಗಟ್ಟೆಯ ಬಳಿ ಹಲವಾರು ಅಭಿಮಾನಿಗಳು ಜಮಾಯಿಸಿದ್ದರು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠೀ ಚಾರ್ಚ್ ಮಾಡಿದರು.

ಇಂಧನ ದರ ಏರಿಕೆ ಖಂಡಿಸಲು ಸೈಕಲ್‍ನಲ್ಲಿ ಬಂದಿದ್ದಾರೆ ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!