ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಇಂದು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದಾಗ ಸ್ಪಂದನಾಗೆ ಹೃದಯಾಘಾತವಾಗಿದೆ.
ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಇವರಿಗೆ ಶೌರ್ಯ ಎಂಬ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು.
ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.
- ಮನೆ ಬಾಗಿಲು ಒಡೆದು ಕಳುವು : 1.30 ಲಕ್ಷ ನಗದು ದೋಚಿದ ಖದೀಮರು
- ಕನ್ನಡ ರಾಜ್ಯೋತ್ಸವ
- 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ
- ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ ಟಿ ದೇವೇಗೌಡನಿಗೆ ಕೊಕ್
- ಮುಂದಿನ ಐದು ದಿನ ರಾಜ್ಯದ ಹಲವಡೆ ಭಾರಿ ಮಳೆ ಸಂಭವ
More Stories
ಮನೆ ಬಾಗಿಲು ಒಡೆದು ಕಳುವು : 1.30 ಲಕ್ಷ ನಗದು ದೋಚಿದ ಖದೀಮರು
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ
ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ ಟಿ ದೇವೇಗೌಡನಿಗೆ ಕೊಕ್