January 4, 2025

Newsnap Kannada

The World at your finger tips!

vijay

ರಾಜ್ಯದ 31ನೇ ಜಿಲ್ಲೆ ವಿಜಯನಗರ : ಅಧೀಕೃತ ಗೆಜೆಟ್ ನಲ್ಲಿ ಘೋಷಣೆ

Spread the love

ರಾಜ್ಯದ 31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ವಿಜಯನಗರವನ್ನು ಘೋಷಣೆ ಮಾಡಿ ಸರ್ಕಾರ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಸೇರ್ಪಡೆಯಾದಂತಾಗಿದೆ.

ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜಶ್ರೀ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ( 1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12)ರ 6ನೇ ಪ್ರಕರಣದ ಮೇರೆಗೆ ಅಗತ್ಯ ಪಡಿಸಲಾದಂತೆ ಬಳ್ಳಾರಿಯ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ, ವಿಜಯ ನಗರ ಜಿಲ್ಲೆ ಎಂಬ ಹೆಸರಿನ ನೂತನ ಜಿಲ್ಲೆಯನ್ನು ರಚಿಸಲಾಗಿದೆ.

ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನವನ್ನಾಗಿ ಹೊಸಪೇಟೆಯನ್ನು ನಿಗದಿ ಮಾಡಲಾಗಿದೆ.

ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!