December 22, 2024

Newsnap Kannada

The World at your finger tips!

WhatsApp Image 2022 12 16 at 7.49.34 PM

Vijayapura: CM agrees to participate in the conference of state journalists ವಿಜಯಪುರ : ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸಿಎಂ ಸಮ್ಮತಿ

ವಿಜಯಪುರ : ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸಿಎಂ ಸಮ್ಮತಿ

Spread the love

ಜ. 9, 10 ರಂದು ವಿಜಯಪುರದಲ್ಲಿ ಪತ್ರಕರ್ತರ ಕಲರವ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಜ. 9 ಮತ್ತು 10 ರಂದು ನಡೆಯಲಿದೆ ಈ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಸಮ್ಮತಿಸಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ತಗಡೂರು ಈ ಹಿಂದೆ ಸಮ್ಮೇಳನ ಡಿ. 23 ಮತ್ತು 24ಕ್ಕೆ ನಿಗದಿಯಾಗಿತ್ತು. ಆದರೆ ಮುಖ್ಯಮಂತ್ರಿಗಳಿಗೆ ಕಾರ್ಯ ಒತ್ತಡದಿಂದಾಗಿ ಡಿಸೆಂಬರ್ ಅಂತ್ಯದಲ್ಲಿ ಬೇಡ. ಜನವರಿ ಮೊದಲ ವಾರದಲ್ಲಿ ಸಮ್ಮೇಳನ ಹಮ್ಮಿಕೊಳ್ಳಿ. ಶೀಘ್ರದಲ್ಲೇ ದಿನಾಂಕ ಖಾತ್ರಿ ಪಡಿಸುವುದಾಗಿ ಸಿಎಂ ಅವರೇ ಕಳೆದ ವಾರ ಭೇಟಿ ಮಾಡಿದ ಸಂಘದ ಪದಾಧಿಕಾರಿಗಳಿಗೆ ಸೂಚಿಸಿದ್ದರು.

ಆದರೆ ಮತ್ತೆ ಶುಕ್ರವಾರ ಭೇಟಿ ಮಾಡಿದ ರಾಜ್ಯ ಘಟಕದ ಪದಾಧಿಕಾರಿಗಳಿಗೆ ಅಂತಿಮವಾಗಿ ಜ. 9 ಮತ್ತು 10ರಂದು ಸಮ್ಮೇಳನಕ್ಕೆ ಒಪ್ಪಿದ್ದಾರೆ ಎಂದವರು ತಿಳಿಸಿದ್ದಾರೆ.ಶಿವಮೂರ್ತಿ ಸ್ವಾಮಿ ವಿರುದ್ಧ ಪಿತೂರಿ ಪ್ರಕರಣ: ಬಸವರಾಜನ್ ಪತ್ನಿ ಸೌಭಾಗ್ಯ ಬಂಧನ

ಉದ್ದೇಶಿತ ಸಮ್ಮೇಳನ ವಿಜಯಪುರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಲಿದೆ.

ಜ. 9 ರಂದು ಬೆಳಗ್ಗೆ 6 ಗಂಟೆಗೆ ರಾಜ್ಯದ ಮೂಲೆ-ಮೂಲೆಗಳಿಂದ ಆಗಮಿಸಿದ ಪ್ರತಿನಿಧಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ.

ಬೆಳಗ್ಗೆ 10 ಗಂಟೆಗೆ ಕಮೀಟಿ ಸಭೆ ನಡೆಯಲಿದೆ. ಬಳಿಕ 11 ಗಂಟೆಗೆ 2021-22 ನೇ ಸಾಲಿನ ಸಂಘದ 89ನೇ ಸರ್ವ ಸದಸ್ಯರ ಮಹಾಸಭೆ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಭಾಗವಹಿಸಿ, ವಿಷಯ ಪ್ರಸ್ತಾಪಿಸಲಿಚ್ಛಿಸುವ ಸದಸ್ಯರು ವಿಷಯ ಸೂಚಿಯನ್ನು ಡಿ. 30ರೊಳಗಾಗಿ ರಾಜ್ಯ ಸಂಘದ ವಿಳಾಸಕ್ಕೆ ಲಿಖಿತವಾಗಿ ಕಳುಹಿಸಿಕೊಡಬೇಕು. ಮೇಲಾಗಿ ಈ ಸಭೆಯಲ್ಲಿ ಭಾಗವಹಿಸುವ ಸದಸ್ಯರಿಗೆ 2022-23ನೇ ಸಾಲಿನ ಗುರುತಿನ ಚೀಟಿ ಕಡ್ಡಾಯವಾಗಿದೆ ಎಂದವರು ತಿಳಿಸಿದ್ದಾರೆ.

ಸಮ್ಮೇಳನ ಉದ್ಘಾಟನೆ : ಬಳಿಕ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಬಳಿಕ ಸಿಎಂ ಜೊತೆಗೆ ಭಾಗವಹಿಸುವ ಸಚಿವರು ಹಾಗೂ ಶಾಸಕರು ಪತ್ರಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಜ. 10 ರಂದು ಎರಡು ಗೋಷ್ಠಿಗಳು ನಡೆಯಲಿವೆ. ಗೋಷ್ಠಿಗಳ ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಸಮ್ಮೇಳನ ಸಮಾರೋಪಗೊಳ್ಳಲಿದೆ ಎಂದು ರಾಜ್ಯಾಧ್ಯಕ್ಷ ಶಿವಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!