April 26, 2025

Newsnap Kannada

The World at your finger tips!

gp

ಗ್ರಾಪಂ ಚುನಾವಣೆ ನಂತರ ಹಳ್ಳಿಗರಿಗೆ ಆಸ್ತಿ ತೆರಿಗೆಯಲ್ಲಿ ಭಾರಿ ಹೊರೆ

Spread the love

ಈ ಗ್ರಾಮ ಪಂಚಾಯತಿ ಚುನಾವಣೆ ಮುಗಿಯುತ್ತಿದ್ದಂತೆ ಗ್ರಾಮೀಣ ಭಾಗದ ಜನರು ಹೊಸ ತೆರಿಗೆ ಭಾರ ಹೊರಲು ಸಿದ್ದರಾಗಬೇಕಿದೆ.

ಈಗಾಗಲೇ ಸರ್ಕಾರ ತೆರಿಗೆ ಯಾವ ಪ್ರಮಾಣದಲ್ಲಿ ಹೆಚ್ಚಿಸಬೇಕು ಎನ್ನುವ ಕೋಷ್ಟಕವನ್ನು ಸಿದ್ಧಪಡಿಸಿದೆ. ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರು ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಹಳ್ಳಿಗಳಲ್ಲಿ ಹೊಸ ತೆರಿಗೆ ನೀತಿಯನ್ನು ಕಡ್ಡಾಯವಾಗಿ ಜಾರಿ ಮಾಡಲೇಬೇಕು.

ಸಂಪನ್ಮೂಲ ಕ್ರೋಡೀಕರಣ ಅನಿವಾರ್ಯ:

ಗ್ರಾಮೀಣಾ ಜನತೆಗೆ ಬಿಗ್ ಶಾಕ್ ತಡೆದುಕೊಳ್ಳಲು ಸಿದ್ದರಿಬೇಕಿದೆ. ಏಕೆಂದರೆ ಗ್ರಾಮಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದವರು ತಮ್ಮ ಗ್ರಾಮದ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢೀಕರಿಸಸಲು ತೆರಿಗೆ ಹೆಚ್ಚಳ ಮಾಡಿಕೊಳ್ಳುವುದು ಅನಿವಾರ್ಯ ವಾಗಿದೆ ಎಂದು ಸರ್ಕಾರ ಹೇಳಿದೆ.

ಯಾವುದಕ್ಕೆ ತೆರಿಗೆ ಹೊರೆ ?

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಕೃಷಿ ತೆರಿಗೆ, ಭೂಮಿ ಮತ್ತು ಕಟ್ಟಡಗಳ ಮೇಲಿನ ತೆರಿಗೆ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳೂ ಕೂಡ ಈಗಾಗಲೇ ಪ್ರಕಟವಾಗಿವೆ.

vermicompost 1111

ಗ್ರಾಮ ಪಂಚಾಯಿತಿಗಳು ಸಾರ್ವಜನಿಕ ಸಹಭಾಗಿತ್ವದಲ್ಲಿ ಆಸ್ತಿಗಳ ಮೌಲ್ಯಮಾಪನ, ಹೊಸ ತೆರಿಗೆ ನೀತಿಯ ಅನುಷ್ಠಾನ, ಸ್ಥಳೀಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಆದಾಯದ ಉತ್ಪಾದಕತೆ ಮತ್ತು ಸಂಗ್ರಹಣೆ ಹೊಂದುವಂತಾಗಬೇಕೆಂಬುದು ಸರ್ಕಾರದ ಆಶಯವಾಗಿದೆ.

Copyright © All rights reserved Newsnap | Newsever by AF themes.
error: Content is protected !!