ಖಳ ನಟ ಲಕ್ಷ್ಮಣ್ ಇನ್ನಿಲ್ಲ

Team Newsnap
1 Min Read
Villain actor Laxman is no more ಖಳ ನಟ ಲಕ್ಷ್ಮಣ್ ಇನ್ನಿಲ್ಲ

ಸ್ಯಾಂಡಲ್ ವುಡ್ ನಟ ಲಕ್ಷ್ಮಣ ಹೃದಯಾಘಾತದಿಂದ ಇಂದು ನಿಧನರಾದರು.

ಕೆಲ ವರ್ಷಗಳಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ರಸ್ತೆ ಮಧ್ಯೆದಲ್ಲೇ ಲಕ್ಷ್ಮಣ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಮೂಡಲಪಾಳ್ಯದ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಇಂದು ನೇತಾಜಿ ಜನ್ಮ ದಿನ: ‘ಪರಾಕ್ರಮ್ ದಿವಸ್ ‘ ಅಚರಣೆ

300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖಳನಟರಾಗಿ ನಟಿಸಿರುವ ಇವರು ಮಲ್ಲ, ಯಜಮಾನ, ಸೂರ್ಯವಂಶ, ಅಂತ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು.

ರೆಬಲ್ ಸ್ಟಾರ್ ಅಂಬರೀಶ್ ಅವರ ನೆಚ್ಚಿನ ನಟ ಎನ್ನುವ ಖ್ಯಾತಿಗೂ ಪಾತ್ರರಾಗಿದ್ದರು. ಡಾ.ರಾಜ್ ಕುಮಾರ್, ಡಾ.ಅಂಬರೀಶ್, ಡಾ.ವಿಷ್ಣುವರ್ಧನ್, ರವಿಚಂದ್ರನ್, ಶಿವರಾಜ್ ಕುಮಾರ್ ಹೀಗೆ ಸಾಕಷ್ಟು ದಿಗ್ಗಜ ನಟರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆ ಇದೆ.
ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಟನರಾಗಿ ಸೇವೆ ಸಲ್ಲಿಸಿ, ಆನಂತರ ಸಿನಿಮಾ ರಂಗಕ್ಕೆ ಬಂದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆದರು.

Share This Article
Leave a comment