ಧಾರವಾಡದ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಕೊಲೆಯ ಪ್ರಕರಣದ ಆರೋಪಿ ಸ್ಥಾನ ದಲ್ಲಿರುವ ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆ.
ಬೇಲ್ ಸಿಗದೇ ಹೋದರೆ ಮಾಜಿ ಸಚಿವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲೇ ದೀಪಾವಳಿ ಆಚರಿಸುವುದು ಬಹುತೇಕ ಪಕ್ಕಾ ಆಗಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಗುರುವಾರ ಬಂಧಿಸಿದ್ದರು. ನಿನ್ನೆಗೆ ಮೂರು ದಿನಗಳ ಸಿಬಿಐ ಕಸ್ಟಡಿ ಮುಗಿದದ್ದರಿಂದ ಇಂದು ಸಿಬಿಐ ವಿನಯ್ ಅವರನ್ನು ವಿಡೀಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಹುಬ್ಬಳ್ಳಿಯ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ವಿನಯ್ ಅವರಿಗೆ ನವೆಂಬರ್ 23ರ ವರೆಗೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಅವರನ್ನು ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಕಳಿಸುವ ಸಾಧ್ಯತೆಗಳವೆ. ಅವರು ಈ ಬಾರಿಯ ದೀಪಾವಳಿಯನ್ನು ಅಲ್ಲಿಯೇ ಆಚರಿಸಬೇಕಾಗಬಹುದು ಎಂದು ಹೇಳಲಾಗುತ್ತಿದೆ.
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
More Stories
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ