ನಾಳೆ ಬೆಳಗ್ಗೆ 10. 30 ರ ವೇಳೆಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಡೆಯಲಿರುವ ಅಪ್ಪು ಅಂತ್ಯ ಕ್ರಿಯೆಯ ಅಂತಿಮ ವಿಧಿವಿಧಾನ ಕಾರ್ಯಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
ಈ ನಡುವೆ ನಾಳೆ ಬೆಳಗ್ಗೆ 6 ರಿಂದ 6:30ರ ವೇಳೆಗೆ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆ ಕಂಠೀರವ ಕ್ರೀಡಾಂಗಣದಿಂದ ಆರಂಭವಾಗಲಿದೆ.
ಕಂಠೀರವ ಕ್ರೀಡಾಂಗಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾ ರಾ ಗೋವಿಂದ ಅವರು, ಬೆಳಗ್ಗೆ 6 ಗಂಟೆ ವೇಳೆ ಪಾರ್ಥಿವ ಶರೀರದ ಮೆರವಣಿಗೆ ಆರಂಭ ಮಾಡಿ ಕಂಠೀರವ ಸ್ಟುಡಿಯೋದಲ್ಲಿ 10 ಗಂಟೆ ವೇಳೆಗೆ ಅಂತಿಮ ವಿಧಿವಿಧಾನ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾಜ್ ಕುಟುಂಬದ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಳ್ಳುತ್ತಿದ್ದು ಎಲ್ಲರೂ ಶಾಂತಿಯಿಂದ ಭಾಗಿಯಾಗಬೇಕು. ಪುನೀತ್ ಅವರನ್ನು ಪ್ರೀತಿಯಿಂದ ಬಿಳ್ಕೋಡಬೇಕಿದೆ. ಯಾವುದೇ ಅಹಿತಕರ ಘಟನೆ ನಡೆದರೇ ಅದು ದೊಡ್ಮನೆಗೆ ಅಗೌರವ ತೋರಿದಂತೆ. ಆದ್ದರಿಂದ ಎಲ್ಲರೂ ಶಾಂತಿಯಿಂದ ಅಂತ್ಯಕ್ರಿಯೆಯಲ್ಲಿ ಭಾಗಿ ಆಗೋಣ ಎಂದು ಮನವಿ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು