ರಾಮನಗರ : ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ ವೇಗದ ಮಿತಿಯನ್ನು ನಿಗದಿಪಡಿಸಿದೆ.
ಸುರಕ್ಷತಾ ಉದ್ದೇಶಗಳಿಗಾಗಿ ನಿಯಮಗಳನ್ನು ಅಳವಡಿಸಿದ ನಂತರವು ಸಂಚಾರ ನಿಯಮಗಳ ಉಲ್ಲಘನೆಯಾಗುತ್ತಿರುವುದನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲು ಸಂಚಾರ ಪೊಲೀಸರು ಆರಂಭಿಸಿದ್ದಾರೆ.
ಹೆದ್ದಾರಿಯುದ್ದಕ್ಕೂ ಅತ್ಯಾಧುನಿಕ ಕ್ಯಾಮರಾಗಳು, ಸೆನ್ಸರ್ಗಳನ್ನು ಅಳವಡಿಸಲಾಗಿದ್ದು ,ಕಳೆದ ಕೆಲವೇ ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿದ್ದಾರೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗಂಟೆಗೆ 130 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ವಾಹನ ಸೀಜ್ ಮಾಡಿ, ಲೈಸೆನ್ಸ್ ಕೂಡ ಅಮಾನತಿನಲ್ಲಿಡಲಾಗುತ್ತದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಅಪಘಾತ ತಡೆಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಈವರೆಗೆ 193 ವಾಹನ ಮಾಲಿಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎರಡು ಲಕ್ಷಕ್ಕೂ ಅಧಿಕ ವಾಹನ ಸವಾರರು ನಿಯಮ ಮೀರಿದ್ದಾರೆ. ಐಟಿಎಮ್ಎಸ್ ಕ್ಯಾಮರಾದಿಂದ ವಾಹನಗಳ ಮೇಲೆ ನಿಗಾ ಇಡಲಾಗುತ್ತಿದೆ. 9 ರೀತಿಯ ನಿಮಯಗಳು ಇದರಲ್ಲಿ ಡಿಟೆಕ್ಟ್ ಆಗುತ್ತವೆ ಎಂದು ಮಾಹಿತಿ ನೀಡಿದ್ದಾರೆ.
ಈಗಾಗಲೇ ಆರು ಸಾವಿರ ಜನರಿಗೆ ದಂಡದ ಸಂದೇಶ ಕಳುಹಿಸಲಾಗಿದ್ದು ,ಉಳಿದ ವಾಹನಸವಾರರಿಗೂ ದಂಡ ಪಾವತಿಸುವಂಯೆ ನೊಟೀಸ್ ನೀಡಲು ಸಿದ್ಧತೆ ಮಾಡಲಾಗುತ್ತಿದೆ.ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್
ಪೊಲೀಸ್ ಇಲ್ಲ, ಕ್ಯಾಮರಾ ಇಲ್ಲ ಅಂತ ವೇಗವಾಗಿ ಹೋಗಬೇಡಿ. ಇಡೀ ಹೆದ್ದಾರಿಯಲ್ಲಿ ಐಟಿಎಮ್ಎಸ್ ಕ್ಯಾಮರಾ ನಿಗಾ ಇದೆ ಎಂದು ಕಾರ್ತಿಕ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
More Stories
ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ: ಕಾರ್ಮಿಕ ಅವಶೇಷಗಳಡಿ ಸಿಲುಕಿದ ದುರಂತ
ಮೈನಿಂಗ್ ಉದ್ಯಮಿಗಳ ಮನೆ ಹಾಗೂ ಕಚೇರಿ ಮೇಲೆ IT ದಾಳಿ
ದೇಶದ ಮೊದಲ ಸೇನಾಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ | Field Marshal KM Cariappa Birth Anniversary