March 15, 2026

Newsnap Kannada

The World at your finger tips!

dks

ಕೋವಿಡ್​ ನಿಯಮ ಉಲ್ಲಂಘನೆ; ಡಿಕೆ ಶಿವಕುಮಾರ್​ಗೆ ಹುಬ್ಬಳ್ಳಿಯಲ್ಲಿ 10 ಸಾವಿರ ರು ದಂಡ

Spread the love

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಬ್ಬಳ್ಳಿ ಭೇಟಿ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ 10 ಸಾವಿರ ರು ದಂಡವನ್ನು ವಿಧಿಸಿದೆ.

ಮೇ 31 ರಂದು ಸಂಜೆ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದ ವೇಳೆ ಜನಜಂಗುಳಿ ವಾತಾವರಣ ನಿರ್ಮಾಣವಾಗಿತ್ತು. ಸಾಮಾಜಿಕ ಅಂತರ ಕಾಪಾಡದ ಹಿನ್ನೆಲೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ ಹಾಕಿದ ಆರೋಪದ ಮೇಲೆ ಮಹಾನಗರ ಪಾಲಿಕೆಯಿಂದ 10 ಸಾವಿರ ರು ದಂಡ ವಿಧಿಸಿದೆ.‌

error: Content is protected !!