ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

Team Newsnap
1 Min Read

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ ಮಾಡಲು ಪೊಲೀಸ್ ಇಲಾಖೆ ಆನ್‌ಲೈನ್ ವ್ಯವಸ್ಥೆ ರೂಪಿಸಿದೆ.


ಇದುವರೆಗೆ ಬೆಂಗಳೂರಿನಲ್ಲಿ ಮಾತ್ರವಿದ್ದ ಈ ವ್ಯವಸ್ಥೆಯನ್ನು ರಾಜ್ಯವ್ಯಾಪಿ ವಿಸ್ತರಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಯ ಜನರು, ಈ ವ್ಯವಸ್ಥೆ ಬಳಸಿಕೊಂಡು ಬಾಕಿ ದಂಡ ಪಾವತಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದ್ದಾರೆ.



https://payfine.mchallan.com:7271/
ಜಾಲತಾಣಕ್ಕೆ ಭೇಟಿ ನೀಡಿ, ವಾಹನ ನೋಂದಣಿ ಸಂಖ್ಯೆ ನಮೂದಿಸಬೇಕು. ಬಳಿಕ,ದಂಡ ವಿವರ ಕಾಣಿಸುತ್ತದೆ. ಅದನ್ನು ಪರಿಶೀಲಿಸಿ, ಆನ್‌ಲೈನ್ ಮೂಲಕವೇ ದಂಡದ ಮೊತ್ತ ಪಾವತಿ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರವೊಂದರಲ್ಲಿಯೇ2.68 ಕೋಟಿ ಪ್ರಕರಣಗಳು ಹಾಗೂ ₹ 1,425 ದಂಡ ಪಾವತಿ ಬಾಕಿ ಇದೆ ಅವರು ಮಾಹಿತಿ‌ ನೀಡಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಬಾಕಿ ಪ್ರಕರಣಗಳು ಇವೆ ಎಂದಿದ್ದಾರೆ.ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

‘ಕೆಲ ತಿಂಗಳ ಹಿಂದೆಯಷ್ಟೇ ದಂಡ ಪಾವತಿಯಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲಾಗಿತ್ತು. ಅಷ್ಟಾದರೂ ಕೆಲವರು ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಅಂಥವರನ್ನು ಪತ್ತೆ ಮಾಡಿ ದಂಡ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ಹೇಳಿದ್ದಾರೆ.

Share This Article
Leave a comment