July 7, 2022

Newsnap Kannada

The World at your finger tips!

fire

ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಹಿಂಸಾಚಾರ: ಗಾಯಗೊಂಡಿದ್ದ ಇಬ್ಬರು ಇಂದು ಸಾವು

Spread the love

ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದರ ಕುರಿತು ನೀಡಿದ್ದ ಹೇಳಿಕೆಯನ್ನು ಖಂಡಿಸಿ ನಿನ್ನೆ ದೇಶದ ಹಲವು ಭಾಗಗಳಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ಇಬ್ಬರು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.

ರಾಂಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ರಾಜೇಂದ್ರ ಇನ್​​ಸ್ಟಿಟ್ಯೂಸ್​ ಆಫ್ ಮೆಡಿಕಲ್ ಸೈನ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನು ಓದಿ – ಬೀದರ್-ಬೆಂಗಳೂರು ಮಧ್ಯೆ ಸಂಚರಿಸಲಿದೆ ಏರ್ ವಿಮಾನ

227 ಮಂದಿ ಬಂಧನ :

ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆದಿತ್ತು.

ಈ ಪ್ರತಿಭಟನೆ ವೇಳೆ ಕಲ್ಲು ತೂರಾಟ ಸೇರಿದಂತೆ ನಾನಾ ಹಿಂಸಾಚಾರ ನಡೆದಿತ್ತು. ಇನ್ನು ಹಿಂಸಾಚಾರ ಸಂಬಂಧ ಉತ್ತರ ಪ್ರದೇಶದಲ್ಲಿ 227 ಮಂದಿಯನ್ನು ಬಂಧಿಸಲಾಗಿದೆ.

error: Content is protected !!