ಗಾಡಿ ಟೋಯಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಕಲ್ಲೇಟು ಹೊಡೆದ ವಿಕಲಚೇತನ ಮಹಿಳೆಯ ಮೇಲೆ ಎಎಸ್‍ಐ ನಾರಾಯಣ ಎಂಬ ಪೋಲೀಸ್ ಅಧಿಕಾರಿ ದರ್ಪ ತೋರಿದ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ಎಸ್ ಜೆ ಪಾಕ್೯ ಬಳಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದರು ಎಂಬ ಆರೋಪದಲ್ಲಿ ಮಹಿಳೆ ವಿರುದ್ದ ಕೇಸ್ ದಾಖಲಾಗಿದೆ.
ಜ.24 ರಂದು ನಡೆದಿರುವ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ಬೆಳಕಿಗೆ ಬಂದಿದೆ. ವೀಡಿಯೋದಲ್ಲಿ ಅಂಗವಿಕಲ ಮಹಿಳೆ ಮೇಲೆ ಎಎಸ್‍ಐ ಹಲ್ಲೆ ಮಾಡಿರುವುದನ್ನು ಕಾಣಬಹುದಾಗಿದೆ.
ಟೋಯಿಂಗ್ ವಾಹನದಲ್ಲಿ ಕೂತಿದ್ದ ಹಲಸೂರ್ ಗೇಟ್ ಸಂಚಾರಿ ಟೋಯಿಂಗ್ ಎಎಸ್ ಐ ನಾರಾಯಣ್ ಮೇಲೆ ವಿಕಲಚೇತನ ಮಹಿಳೆ ಕಲ್ಲೇಟು ನೀಡಿದ್ದಾರೆ.
ಪರಿಣಾಮ ಎಎಸ್‍ಐ ಮುಖಕ್ಕೆ ಕಲ್ಲು ತಾಗಿ ರಕ್ತ ಬಂದಿದೆ. ಇದರಿಂದ ಸಿಟ್ಟಿಗೆದ್ದ ಎಎಸ್‍ಐ, ಕೂಡಲೇ ವಾಹನದಿಂದ ಕೆಳಗಿಳಿದು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಬೂಟಿನಿಂದ ಒದ್ದು ಹಲ್ಲೆ ಮಾಡಿದ್ದಾರೆ.
ಈ ಮಹಿಳೆ ಕಲ್ಲಿನಿಂದ ಹಲ್ಲೆ ಮಾಡಿದ್ದೇಕೆ..?
ಈ ವಿಕಲಚೇತನ ಮಹಿಳೆಗೆ ಟೋಯಿಂಗ್ ಮಾಡುವುದನ್ನು ಕಂಡರೆ ಆಗುತ್ತಿರಲಿಲ್ಲವಂತೆ. ಹೀಗಾಗಿ ಟೋಯಿಂಗ್ ನವರು ಕಂಡರೆ ಸಾಕು ಕಲ್ಲಿನಿಂದ ಹಲ್ಲೆ ಮಾಡುತ್ತಾರೆ. ಅದೇ ರೀತಿ ಎಎಸ್‍ಐ ಮೇಲೆಯೂ ಆಕೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಈಗ ಆಕೆಯನ್ನು ಬಂಧಿಸಲಾಗಿದೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ