ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ವರ್ಲ್ಡ್ ಕಪ್ ನಂತರ ಭಾರತೀಯ ಕ್ರಿಕೆಟ್ನ ಟಿ20 ಕ್ರಿಕೆಟ್ನ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.
ಈ ಮಧ್ಯೆ ವಿರಾಟ್ ಕೊಹ್ಲಿಯನ್ನು ಒನ್ ಡೇ ಇಂಟರ್ನ್ಯಾಷನಲ್ನ ನಾಯಕತ್ವದಿಂದಲೂ ಕೆಳಗಿಳಿಸಲು ಬಿಸಿಸಿಐ ಮತ್ತು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಗೊತ್ತಾಗಿದೆ.
ಈಗಾಗಲೇ ಬೋರ್ಡ್ ಮತ್ತು ಸೆಲೆಕ್ಷನ್ ಕಮಿಟಿಯಲ್ಲಿ ವಿರಾಟ್ರನ್ನು ಕೆಳಗಿಳಿಸುವ ಬಗ್ಗೆ ಚರ್ಚೆ ಹೆಚ್ಚಾಗಿದೆ. ಒನ್ಡೇ ಇಂಟರ್ನ್ಯಾಷನಲ್ಗೆ ಇಬ್ಬರು ವೈಸ್ ಕ್ಯಾಪ್ಟನ್ಗಳನ್ನು ನೇಮಿಸಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ.
.ವಿರಾಟ್ ಟಿ 20 ವರ್ಲ್ಡ್ ಕಪ್ನಲ್ಲಿ ಗೆದ್ದು ತೋರಿಸಲೇಬೇಕಿದೆ. ಒಂದು ವೇಳೆ ಟಿ 20 ವರ್ಲ್ಡ್ಕಪ್ನಲ್ಲಿ ಟೀಂ ಇಂಡಿಯಾ ಫೈನಲ್ ತಲುಪಿದರೂ ಅದರು ಕೊಹ್ಲಿ ಪಾಲಿಗೆ ನಷ್ಟವಾಗಿ ಪರಿಣಮಿಸಲಿದೆ.
ಟಿ20 ವರ್ಲ್ಡ್ಕಪ್ನಲ್ಲಿ ಕಪ್ ಗೆಲ್ಲುವಲ್ಲಿ ವಿರಾಟ್ ವಿಫಲರಾದರೆ ಅವರನ್ನು ಒನ್ ಡೇ ಇಂಟರ್ನ್ಯಾಷನಲ್ನಿಂದಲೂ ಕೆಳಗಿಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಟಿ20 ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ – ವಿರಾಟ್
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ ಎಂದು ಅಧಿಕೃತವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.
ಕೊಹ್ಲಿ, ನಾನು ಕಳೆದ 8-9 ವರ್ಷಗಳಿಂದ ಭಾರತ ತಂಡಕ್ಕಾಗಿ ಆಡುತ್ತಿದ್ದೇನೆ. ನನಗೆ ತಂಡದ ನಾಯಕತ್ವ ನೀಡಿ 5-6 ವರ್ಷಗಳು ಕಳೆದಿದೆ. ಈಗಾಗಲೇ ಸಾಕಷ್ಟು ಯಶಸ್ಸನ್ನು ಕಂಡಿದ್ದೇನೆ. ಇದೀಗ ನಾನು ನನ್ನ ಬ್ಯಾಟಿಂಗ್ ಸಾಮರ್ಥ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸುವ ಉದ್ದೇಶದಿಂದ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವ ತ್ಯಜಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ