ಲಯಕ್ಕೆ ಮರಳಿದ ವಿರಾಟ್
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಾಗದ ವಿರಾಟ್ ಕೊಹ್ಲಿ, ಈ ಪಂದ್ಯದಲ್ಲಿ ತಮ್ಮ ನೈಜ ಆಟವನ್ನು ಮೆರೆದರು. ಆರಂಭಿಕ ಆಟಗಾರ ರೋಹಿತ್ ಶರ್ಮಾ ಬೇಗನೇ ಔಟ್ ಆದ ಬಳಿಕ ಅವರು ಶುಭಮನ್ ಗಿಲ್ ಜೊತೆಗೆ ತಂಡವನ್ನು ಮುನ್ನಡೆಸಿದರು. ಕೊಹ್ಲಿ ಪರಿಪೂರ್ಣ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಧಾರವಾಗಿದ್ದು, ಅವರ ಆಟ ಅಭಿಮಾನಿಗಳಿಗೆ ಸಂತೋಷ ತಂದಿದೆ.
ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ
ಈ ಪಂದ್ಯದಲ್ಲಿ ಕೇವಲ 16 ರನ್ ಗಳಿಸುವ ಮೂಲಕ, ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಭಾರತದ ಪ್ರಥಮ ಆಟಗಾರರಾದರು. ಈ ಸಾಧನೆಯೊಂದಿಗೆ, ಅವರು ಸಚಿನ್ ತೆಂಡೂಲ್ಕರ್ ಅವರ 3990 ರನ್ ದಾಖಲೆಯನ್ನು ಮುರಿದರು. ಇದರಿಂದಾಗಿ ವಿರಾಟ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ 4000ಕ್ಕೂ ಹೆಚ್ಚು ರನ್ ಗಳಿಸಿದ ಅಪರೂಪದ ಆಟಗಾರರಾದರು.
ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಆಟಗಾರರ ಪೈಕಿ ಕೊಹ್ಲಿ ಈಗ ಆರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ದಿಗ್ಗಜ ಡಾನ್ ಬ್ರಾಡ್ಮನ್ 5028 ರನ್‌ಗಳೊಂದಿಗೆ ಮುಂಚೂಣಿಯಲ್ಲಿದ್ದಾರೆ. ಅವರ ಬಳಿಕ ಅಲನ್ ಬಾರ್ಡರ್, ಸ್ಟೀವ್ ಸ್ಮಿತ್, ವಿವಿಯನ್ ರಿಚರ್ಡ್ಸ್ ಮತ್ತು ರಿಕಿ ಪಾಂಟಿಂಗ್ ಇದ್ದಾರೆ.ಇದನ್ನು ಓದಿ –ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: 8 ಮಂದಿ ಬಂಧನ
ಮತ್ತೊಂದು ದಾಖಲೆ
ಮೂರನೇ ಏಕದಿನ ಪಂದ್ಯದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಎಸೆದ 18ನೇ ಓವರ್‌ನಲ್ಲಿ ಸಿಂಗಲ್ ತೆಗೆದುಕೊಂಡ ಮೂಲಕ ವಿರಾಟ್, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 73ನೇ ಅರ್ಧಶತಕ ಬಾರಿಸಿದರು. ಈ ಮೂಲಕ ಅವರು ಮತ್ತೊಂದು ಮಹತ್ವದ ಮೈಲಿಗಲ್ಲು ತಲುಪಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು