ವಿರಾಟ್ ಕೊಹ್ಲಿ 71ನೇ ಶತಕ – ಭಾರತಕ್ಕೆ ಭರ್ಜರಿ 101 ರನ್ ಜಯ

Team Newsnap
2 Min Read

ಸಾವಿರ ದಿನಗಳ ಸುದೀರ್ಘ ಅವಧಿಯ ನಂತರ ವಿರಾಟ್ ಕೊಹ್ಲಿ ಶತಕ ದಾಖಲಿಸಿದ್ದಾರೆ.

71ನೇ ಶತಕ ಗಳಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಏಷ್ಯಾಕಪ್ ಸೂಪರ್ 4 ಹಂತದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಅಬ್ಬರಿಸಿದರು.

104ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಿರುವ ವಿರಾಟ್ ಕೊಹ್ಲಿ 3584 ರನ್ ಗಳಿಸಿದ್ದಾರೆ. ಅಫ್ಘಾನಿಸ್ತಾನದ ವಿರುದ್ಧ ಗಳಿಸಿದ ಶತಕ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗಳಿಸಿದ ಮೊದಲ ಶತಕವಾಗಿದೆ.

virat 1

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 71ನೇ ಶತಕ ದಾಖಲಿಸುವ ಮೂಲಕ ರಿಕಿ ಪಾಂಟಿಂಗ್ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಪಾರ್ವತಿ ವೇಷಧಾರಿ 20ರ ಹುಡುಗನಿಗೆ ಹೃದಯಾಘಾತ : ನೃತ್ಯ ಮಾಡುತ್ತಲೇ ಸಾವು

ನಿಧಾನ ಗತಿಯಿಂದಲೇ ಇನ್ನಿಂಗ್ಸ್ ಆರಂಭಿಸಿದ ಕೊಹ್ಲಿ ನಂತರ ಭರ್ಜರಿ ಬೌಂಡರಿ, ಸಿಕ್ಸರ್ ಬಾರಿಸಿದರು. 61 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ, 6 ಭರ್ಜರಿ ಸಿಕ್ಸರ್ ಸಹಿತ 122 ರನ್ ಗಳಿಸಿದರು. 200 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದು, ವಿಶ್ವಕಪ್‌ ಸನಿಹವಾಗುತ್ತಿರುವ ಸಂದರ್ಭದಲ್ಲಿ ಅವರ ಶತಕ ಟೀಂ ಇಂಡಿಯಾ ಪಾಲಿಗೆ ಭಾರಿ ಮಹತ್ವದ್ದಾಗಿದೆ.

team India

ಭರ್ಜರಿ ಗೆಲುವಿನೊಂದಿಗೆ ಟೂರ್ನಿಗೆ ಗುಡ್ ಬೈ

ಏಷ್ಯಾಕಪ್‍ನ ಸೂಪರ್ 4 ಹಂತದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಭರ್ಜರಿ ಶತಕ ಮತ್ತು ಭುವನೇಶ್ವರ್ ಕುಮಾರ್ ಮಾರಕ ದಾಳಿಯ ಪರಿಣಾಮವಾಗಿ ಅಘ್ಘಾನಿಸ್ತಾನ ವಿರುದ್ಧ ಭಾರತ 101 ರನ್‍ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಗೆ ಗುಡ್ ಬೈ ಹೇಳಿದೆ.

ಟಾಸ್ ಗೆದ್ದ ಅಘ್ಘಾನಿಸ್ತಾನ ಭಾರತಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು.

ಭಾರತ ನೀಡಿದ 213 ರನ್‍ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಲಾಗದೆ ಬೆದರಿ ಬೆಂಡಾದ ಅಘ್ಘಾನಿಸ್ತಾನ ಕೇವಲ 111 ರನ್ ಸಿಡಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಇತ್ತ 101 ರನ್‍ಗಳ ಈ ಭರ್ಜರಿ ಗೆಲುವಿನೊಂದಿಗೆ ಭಾರತ ಟೂರ್ನಿಗೆ ಅಂತ್ಯ ಹಾಡಿದೆ. ಇದನ್ನೂ ಓದಿ: 2 ವರ್ಷ 9 ತಿಂಗಳು 16 ದಿನಗಳ ಬಳಿಕ ಕೊಹ್ಲಿ ಶತಕ – ಟಿ20ಯಲ್ಲಿ ಚೊಚ್ಚಲ 100

ರಾಹುಲ್ 62 ರನ್ (41 ಎಸೆತ, 6 ಬೌಂಡರಿ, 2 ಸಿಕ್ಸ್) ಬಾರಿಸಿ ಔಟ್ ಆದರು. ಈ ಮೊದಲು ಕೊಹ್ಲಿ ಜೊತೆ ಮೊದಲ ವಿಕೆಟ್‍ಗೆ 199 ರನ್ (76 ಎಸೆತ) ಜೊತೆಯಾಟವಾಡಿದರು. ಆ ಬಳಿಕ ಬಂದ ಸೂರ್ಯಕುಮಾರ್ ಒಂದು ಸಿಕ್ಸ್‌ಗೆ ವಿಕೆಟ್ ಕಳೆದುಕೊಂಡರು.

ಅಘ್ಘಾನಿಸ್ತಾನ ಪರ ಆರಂಭಿಕರಿಬ್ಬರು ಶೂನ್ಯ ಸುತ್ತಿದರೆ, ಆ ಬಳಿಕ ಬಂದ 3 ಜನ ಒಂದಂಕಿ ಮೊತ್ತಕ್ಕೆ ಸುಸ್ತಾದರು. ಇತ್ತ ಭುವಿ 4 ಓವರ್ ಎಸೆದು 4 ರನ್ ನೀಡಿ 5 ವಿಕೆಟ್ ಕಿತ್ತು ಮಿಂಚಿದರು. ರಶೀದ್ ಖಾನ್ 15 ರನ್ (19 ಎಸೆತ, 2 ಬೌಂಡರಿ) ಬಾರಿಸಿ ವಿಕೆಟ್ ಕಳೆದುಕೊಂಡರು. ಇತ್ತ ಇಬ್ರಾಹಿಂ ಜದ್ರಾನ್ 64 ರನ್ ( 59 ಎಸೆತ, 4 ಬೌಂಡರಿ, 2 ಸಿಕ್ಸ್) ಸಿಡಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ನಿಗದಿತ ಓವರ್‌ಗಳಲ್ಲಿ ಅಘ್ಘಾನಿಸ್ತಾನ 8 ವಿಕೆಟ್ ನಷ್ಟಕ್ಕೆ 111 ರನ್ ಸಿಡಿಸಿತು.

ಭಾರತದ ಪರ ಭುವನೇಶ್ವರ್ ಕುಮಾರ್ 5 ವಿಕೆಟ್ ಕಿತ್ತು ಮಿಂಚಿದರೆ, ಅರ್ಶ್‍ದೀಪ್ ಸಿಂಗ್, ಆರ್. ಅಶ್ವಿನ್ ಮತ್ತು ದೀಪಕ್ ಹೂಡಾ ತಲಾ 1 ವಿಕೆಟ್ ಪಡೆದು ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾದರು.

Share This Article
Leave a comment