ನಾಳೆಯಿಂದ ಮೈಸೂರು ಅರಮನೆ, ಮೃಗಾಲಯ, ಕಾರಂಜಿ ಕೆರೆ ವೀಕ್ಷಣೆಗೆ ಅವಕಾಶ

Team Newsnap
1 Min Read

ನಾಳೆಯಿಂದ ಮೈಸೂರು ಅರಮನೆ, ಮೃಗಾಲಯ, ಕಾರಂಜಿ ಕೆರೆ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಲಾಗಿದೆ.

ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಭಂಧಿಸಲಾಗಿತ್ತು.

ನಾಳೆಯಿಂದ ಅರಮನೆಯ ವೀಕ್ಷಣೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಅವಕಾಶವಿರಲಿದೆ. ಅರಮನೆಯ ವೆಬ್‌ಸೈಟ್ www.mysorepalace.gov.in ನಲ್ಲಿ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಂತೆ ಕೋರಲಾಗಿದೆ.

ಪ್ರವಾಸಿಗರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪದೇ ಮಾಸ್ಕ್ ಧರಿಸಬೇಕು. ಇನ್ನು ಅರಮನೆಯ ಆವರಣದಲ್ಲಿ ಸೂಚನಾ ಫಲಕಗಳ ಮೂಲಕ ಜಾಗೃತಿ ಮೂಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ ಹೇಳಿದ್ದಾರೆ

ಮೈಸೂರು ಮೃಗಾಲಯ, ಕಾರಂಜಿ ಕೆರೆ ವೀಕ್ಷಣೆಗೂ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಚಾಮರಾಜೇಂದ್ರ ಮೃಗಾಲಯವು, ʻಕೋವಿಡ್‌ ಕಾರಣದಿಂದಾಗಿ ಮೃಗಾಲಯ ಹಾಗೂ ಕಾರಂಜಿ ಕೆರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈಗ ಅನ್‌ಲಾಕ್‌ ಘೋಷಿಸಲಾಗಿತ್ತು. ಈಗ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.

Share This Article
Leave a comment