ಸಂಪುಟ ಪುನಾರಚನೆಯು ವರಿಷ್ಠರ ಗಮನದಲ್ಲಿ ಇದೆ. ಪುನಾರಚನೆ ಯಾವಾಗ ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಈ ಬಗ್ಗೆ ವರಿಷ್ಠರು ಯಾವಾಗ ಕರೆಯುತ್ತಾರೋ ಆಗ ಭೇಟಿ ಮಾಡಿ ತೀರ್ಮಾನಿಸುತ್ತೇನೆ ಎಂದು ಹೇಳಿದರು.
ನಿಗಮ ಮಂಡಳಿ ವಿಚಾರವಾಗಿ ಮಾತನಾಡಿ, ಪಕ್ಷದ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಜೊತೆ ಚರ್ಚೆ ಮಾಡಿ ಹೇಳುತ್ತಾರೆ. ಆ ನಂತರ ನಿಗಮ ಮಂಡಳಿ ನೇಮಕ ಆಗುತ್ತದೆ. ಈ ಬಗ್ಗೆ ನನ್ನ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದರು
ಬೆಳಗಾವಿ ರಹಸ್ಯ ಸಭೆ ವಿಚಾರವಾಗಿ ಯಾವುದೇ ಗೊಂದಲ ಇಲ್ಲ. ಅದು ರಹಸ್ಯ ಸಭೆ ಅಂತಾ ನೀವು ಹೇಳುತ್ತೀರಾ. ಆದರೆ ಯಾರಾದರೂ ಸೇರಿದರೆ ಅದು ರಹಸ್ಯ ಸಭೆ ಆಗುತ್ತಾ? ಕಾಂಗ್ರೆಸ್‍ನಲ್ಲೂ ಹಲವು ಸಭೆಗಳು ಆಗುತ್ತವೆ. ಅವುಗಳನ್ನು ರಹಸ್ಯ ಸಭೆ ಅಂತಾ ಹೇಳುತ್ತೀರಾ ಎಂದು ಪ್ರಶ್ನಿಸಿದರು.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು