Main News

ವಿಧಾನ ಪರಿಷತ್​ನ 4 ಕ್ಷೇತ್ರಗಳಿಗೆ ನಾಳೆ ಮತದಾನ: 2.84 ಲಕ್ಷ ಮತದಾರರು, 49 ಮಂದಿ ಚುನಾವಣಾ ಕಣದಲ್ಲಿ

ನಾಳೆ ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆಗೆ ಸಿದ್ದತೆಗಳು ಪೂರ್ಣಗೊಂಡಿವೆ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಶನಿವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ ನಾಳೆ ಮತದಾನ ನಡೆಯಲಿದೆ.

ಚುನಾವಣೆಯ ಮಾಹಿತಿ :

  • ಚುನಾವಣೆ ನಡೆಯುವ 48 ಗಂಟೆ ಮೊದಲು ಶೂನ್ಯ ಅವಧಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಬಹಿರಂಗ ಪ್ರಚಾರಕ್ಕೆ ಅವಕಾಶ ಇರುವುದಿಲ್ಲ.
  • ಇಂದು ಸಂಜೆಯವರೆಗೆ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಳ್ಳಲು ಅವಕಾಶ ಇದೆ.
  • ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
  • ಜೂನ್ 15 ರ ಬುಧವಾರ ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ.
  • ವಾಯುವ್ಯ ಪದವೀಧರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ದತೆ ಕೈಗೊಂಡಿದೆ.

ಎಲ್ಲೆಲ್ಲಿ ಯಾರು ಯಾರು ಸ್ಪರ್ಧೆ?

ಪಶ್ಚಿಮ ಶಿಕ್ಷಕರ ಕ್ಷೇತ್ರ

  • ಬಿಜೆಪಿ-ಬಸವರಾಜ ಹೊರಟ್ಟಿ
  • ಕಾಂಗ್ರೆಸ್-ಬಸವರಾಜ ಗುರಿಕಾರ
  • ಜೆಡಿಎಸ್ -ಶ್ರೀಶೈಲ ಗಡದಿನ್ನಿ

ವಾಯುವ್ಯ ಪದವೀಧರ ಕ್ಷೇತ್ರ

  • ಬಿಜೆಪಿ-ಹಣಮಂತ ನಿರಾಣಿ
  • ಕಾಂಗ್ರೆಸ್-ಸುನೀಲ ಸಂಕ

ದಕ್ಷಿಣ ಪದವೀಧರ ಕ್ಷೇತ್ರ

  • ಬಿಜೆಪಿ-ಎಂ.ವಿ. ರವಿಶಂಕರ್
  • ಕಾಂಗ್ರೆಸ್-ಜಿ.ಎಂ. ಮಧು
  • ಜೆಡಿಎಸ್-ಎಚ್.ಕೆ. ರಾಮು

ವಾಯುವ್ಯ ಶಿಕ್ಷಕರ ಕ್ಷೇತ್ರ

  • ಬಿಜೆಪಿ- ಅರುಣ್ ಶಹಾಪುರ
  • ಕಾಂಗ್ರೆಸ್-ಪ್ರಕಾಶ್ ಹುಕ್ಕೇರಿ
  • ಜೆಡಿಎಸ್-ಚಂದ್ರಶೇಖರ್ ಲೋಣಿ

ಕನ್ನಡ ಚಳವಳಿ ಪಕ್ಷ-ವಾಟಾಳ್ ನಾಗರಾಜ್

ಇದನ್ನು ಓದಿ – ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ

ಮತದಾನಕ್ಕೆ ಗುರುತಿನ ಚೀಟಿ:

  • ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಮತದಾನ ದಿನದಂದು ಅರ್ಹ ಮತದಾರರು ತಮ್ಮ ಮತವನ್ನು ಚಲಾಯಿಸಲು ಚುನಾವಣಾ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗ ನಿಗದಿಪಡಿಸಿರುವ ದಾಖಲೆಗಳನ್ನು ಸಹ ಬಳಸಿ ಮತ ಚಲಾಯಿಸಬಹುದು.
  • ಆಧಾರ ಗುರುತಿನ ಚೀಟಿ, ವಾಹನ ಚಾಲನಾಪತ್ರ, ಪ್ಯಾನ್ ಕಾರ್ಡ್, ಇಂಡಿಯನ್ ಪಾಸ್‌ಪೊರ್ಟ, ಸೇವಾ ಗುರುತಿನ ಪತ್ರ,ಎಂ.ಪಿ.,ಎ.ಎಲ್.ಎ.,ಎ.ಎಲ್.ಸಿ ಕಚೇರಿ ಗುರುತಿನಪತ್ರ, ಅರ್ಹ ಮತದಾರರಾಗಿರುವ ಶಿಕ್ಷಕರಿಗೆ ಅವರ ಶೈಕ್ಷಣಿಕ ಸಂಸ್ಥೆಗಳು ನೀಡಿರುವ ಸೇವಾ ಗುರುತಿನಪತ್ರ, ವಿಶ್ವವಿದ್ಯಾಲಯಗಳು ನೀಡಿರುವ ಪದವಿ, ಡಿಪ್ಲೊಮಾ ಪ್ರಮಾಣಪತ್ರಗಳ ಮೂಲಪ್ರತಿ ಹಾಗೂ ಸಕ್ಷಮ ಪ್ರಾಧಿಕಾರ ನೀಡಿರುವ ದೈಹಿಕ ಅಂಗವಿಕಲ ಪ್ರಮಾಣಪತ್ರವನ್ನು ಮತಗಟ್ಟ ಅಧಿಕಾರಿಗಳಿಗೆ ತೊರಿಸಿ, ಮತ ಚಲಾಯಿಸಬಹುದು.

ಎಷ್ಟು ದೂರು ದಾಖಲು :

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈವರೆಗೆ 516 ಪ್ರಕರಣಗಳು ದಾಖಲಾಗಿವೆ. ಚಾಮರಾಜನಗರದಲ್ಲಿ 162, ಹಾಸನದಲ್ಲಿ 63, ಮಂಡ್ಯದಲ್ಲಿ 178, ಮೈಸೂರಿನಲ್ಲಿ 113 ಪ್ರಕರಣ ದಾಖಲಾಗಿವೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024