ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ವಿಧಾನ ಸಭೆಗೆ ಮತದಾನ : ಡಿ 8 ರಂದು ಮತ ಎಣಿಕೆ

Team Newsnap
1 Min Read
Voting for Legislative Assembly in two phases on December 1, 5 in Gujarat: Counting of votes on December 8 ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ವಿಧಾನ ಸಭೆಗೆ ಮತದಾನ : ಡಿ 8 ರಂದು ಮತ ಎಣಿಕೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಮೂಹೂರ್ತಫಿಕ್ಸ್ ಆಗಿದೆ, ಡಿಸೆಂಬರ್‌ 1 ರಂದು ಮೊದಲ ಹಂತ ಹಾಗೂ ಡಿಸೆಂಬರ್‌ 5ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಅಲ್ಲದೇ ಡಿಸೆಂಬರ್‌ 8ಕ್ಕೆ ಮತ ಎಣಿಕೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಅವಕಾಶ

ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ಗುಜರಾತ್ ವಿಧಾನಸಭೆಯಲ್ಲಿ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ, ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಜೊತೆಗೆ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಯಾರಿಗೆ ಎಷ್ಟು ಸ್ಥಾನ ಲಭ್ಯವಾಗಿತ್ತು ?

2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 182 ಸ್ಥಾನಗಳ ಪೈಕಿ 99 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 77 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, ಇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಚುನಾವಣೆಯಲ್ಲಿ ಸೋತರೂ 30 ವರ್ಷಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು‌.

Share This Article
Leave a comment