ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಬಂಧನ ನಂತರ ಪ್ರಕರಣದ ಎರಡನೇ ಆರೋಪಿ ರಶ್ಮಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಬಂಧಿತ ರಶ್ಮಿ ಮುರುಘಾ ಮಠದ ಹೆಣ್ಣು ಮಕ್ಕಳ ಹಾಸ್ಟೆಲ್ನ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಂತ್ರಸ್ತ ಇಬ್ಬರು ಮಕ್ಕಳು ನೀಡಿದ ದೂರಿನಲ್ಲಿ ವಾರ್ಡನ್ ರಶ್ಮಿ ವಿರುದ್ಧವೂ ಆರೋಪ ಮಾಡಿದ್ದರು.
ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಐಸಿಯುಗೆ ಶಿಪ್ಟ್ – ಬೆಂಗಳೂರಿಗೆ ಕರೆತರುವ ಸಾಧ್ಯತೆ
ಪ್ರಕರಣ ಸಂಬಂಧ ಮುರುಘಾ ಶರಣರನ್ನು ಪೊಲೀಸರು ಬಂಧನಕ್ಕೂ ಮೊದಲೇ ವಾರ್ಡನ್ ರಶ್ಮಿರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯಕ್ಕೆ ಹಾಸ್ಟೆಲ್ ವಾರ್ಡನ್ ಆಗಿದ್ದ ರಶ್ಮಿ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಸದ್ಯ ರಶ್ಮಿರನ್ನು ಪೊಲೀಸರು ಚಿತ್ರದುರ್ಗದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದು, ವಿಚಾರಣೆಯನ್ನು ಮಾಡಲಿದ್ದಾರೆ.
ಸಂತ್ರಸ್ತ ಬಾಲಕಿಯರು ನೀಡಿರುವ ದೂರಿನ ಆಧಾರದ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಉಳಿದ ಮೂರನೇ ಆರೋಪಿ ಪರಮಶಿವಯ್ಯ, ನಾಲ್ಕನೇ ಆರೋಪಿ ಗಂಗಾಧರಯ್ಯ, ಐದನೇ ಆರೋಪಿ ಬಸವಾದಿತ್ಯ ಸದ್ಯಕ್ಕೆ ನಾಪತ್ತೆಯಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು