ಮೈಸೂರು : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದೆ. ಪರಿಣಾಮ ಕೆಆರ್‌ಎಸ್ ಆಣೆಕಟ್ಟೆಯ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ಮಟ್ಟ 102.80 ಅಡಿಗೆ ಏರಿದೆ. ನೀರಿನ ಸಂಗ್ರಹ 25.085 ಟಿಎಂಸಿಗೆ ಏರಿಕೆ ಕಂಡಿದೆ. ಇನ್ನು ಕೆಆರ್ ಎಸ್ ಡ್ಯಾಂಗೆ 8,425 ಕ್ಯೂಸೆಕ್ ಒಳಹರಿವು ಬರುತ್ತಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 102.80 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಕೆಆರ್‌ಎಸ್ ಡ್ಯಾಂನಲ್ಲಿ 25.085 ಟಿಎಂಸಿ ನೀರು ಸಂಗ್ರಹವಾಗಿದೆ. ಕುಡಿಯುವ ನೀರಿಗಾಗಿ 567 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು