ಭವಿಷ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ – ರವೀಂದ್ರ ಶ್ರೀಕಂಠಯ್ಯ

Team Newsnap
1 Min Read

ಮಂಡ್ಯ: – ಕಾವೇರಿ ಜಲಾಶಯಗಳಿಂದ ನಿರಂತರ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು, ಈ ವೇಳೆ ಮಾತನಾಡಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

kaveri fight mandya

“ಕಾವೇರಿ ನದಿ ಪಾತ್ರದ ಅಣೆಕಟ್ಟೆಗಳ ವಾಸ್ತವತೆಯನ್ನು ಮನವರಿಕೆ ಮಾಡದೇ ನಿತ್ಯ 7,000 ಕ್ಯೂಸೆಕ್ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯಿಂದ ಭವಿಷ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಲಿದ್ದು, ಇದನ್ನು ಮನಗೊಂಡು, ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಿ ರೈತರ ಹೋರಾಟಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಬೇಕೆಂದು” ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಕರೆ ನೀಡಿದರು ಕಾವೇರಿ ನೀರು ಹರಿಸಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ – ಸಿ.ಎಸ್.ಪುಟ್ಟರಾಜು.

ಅಣೆಕಟ್ಟೆಯಿಂದ ನೀರು ಹೋದ ನಂತರ ಪರಿಸ್ಥಿತಿ ಏನಾಗಲಿದೆ ಎಂಬುವುದನ್ನು ಜಿಲ್ಲೆಯ ಉಸ್ತುವಾರಿ ಸಚಿವ, ಸಂಸದೆ ಹಾಗೂ ಶಾಸಕರು ಅರಿತುಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಸೌಖ್ಯಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೇಲಿನ ಮಮತೆಗಾಗಿ ರೈತರ ಹಿತ ಬಲಿಕೊಟ್ಟು ನೀರು ಬಿಡಬೇಡಿ, ಕೂಡಲೇ ನೀರು ನಿಲ್ಲಿಸದಿದ್ದರೆ ಹೋರಾಟ ಉಗ್ರ ರೂಪಕ್ಕೆ ತೆರಳಲಿದೆ ಎಂಬುದನ್ನು ಮನಗಾಣಬೇಕೆಂದರು.

ಭವಿಷ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ – ರವೀಂದ್ರ ಶ್ರೀಕಂಠಯ್ಯ – Drinking water in the future will also be affected – Ravindra Srikanthaiah #MANDYA #KARNATAKA

Share This Article
Leave a comment