ಮೈಸೂರು: ನಾಗಮಂಗಲದಲ್ಲಿ ಕಿಡಿಗೇಡಿಗಳು ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲುತೂರಾಟ, ಪೆಟ್ರೋಲ್ ಬಾಂಬ್ ಎಸೆದು ಅಂಗಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಸರ್ಕಾರ ಮೊದಲು ಮುಸ್ಲಿಂರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಗಳನ್ನು ವಶಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ನಾವೂ ಕೂಡ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಹೇಳಿದ್ದಾರೆ.
ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಮೆರವಣಿಗೆ ಮಾಡಲಾಗುತ್ತಿದೆ. ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು.ಇದನ್ನು ಓದಿ –ಶ್ರೀರಾಮಕೃಷ್ಣ ಪರಮಹಂಸರು
ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ