ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದು ಹೇಳಿದರು.
ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದೂ ಧೃತಿಗೆಡುವುದಿಲ್ಲ ಎಂದು ಮಾಜಿ ಸಿಎಂ ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದಾರೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ