ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿ ಪ್ರವಾಸಕ್ಕೆ ಭಾರತ ತಂಡ ಪ್ರಕಟ

Team Newsnap
1 Min Read
West Indies tour to India ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿ ಪ್ರವಾಸಕ್ಕೆ ಭಾರತ ತಂಡ ಪ್ರಕಟ #INDvsWI #kanndanews #BCCI #Westindies

ವಿಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಪ್ರಕಟಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮಾತ್ರ ತಂಡದ ನಾಯಕತ್ವ ವಹಿಸಲಿದ್ದಾರೆ. ಚೇತೇಶ್ವರ ಪೂಜಾರ ಅವರನ್ನ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.

ಅಜಿಂಕ್ಯ ರಹಾನೆ ಟೆಸ್ಟ್ ಸರಣಿಗೆ ಉಪನಾಯಕನ ಜವಾಬ್ದಾರಿಯನ್ನ ಪಡೆದುಕೊಂಡಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಕೆ. ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.ರಾಜ್ಯದಲ್ಲಿ SDA & FDA ಹುದ್ದೆಗಳ ಭರ್ತಿ : ಅರ್ಜಿ ಪ್ರಕ್ರಿಯೆ ಆರಂಭ

ಜುಲೈ 12 ರಿಂದ ವಿಂಡೀಸ್ ಪ್ರವಾಸ ಆರಂಭ.!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನ ಆಡಲಿದೆ. ಜುಲೈ 12 ರಿಂದ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಇದರ ನಂತರ ಎರಡನೇ ಟೆಸ್ಟ್ ಪಂದ್ಯ ಜುಲೈ 20 ರಿಂದ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಕುರಿತು ಮಾತನಾಡುತ್ತಾ, ಇದು ಜುಲೈ 27 ರಿಂದ ಪ್ರಾರಂಭವಾಗಲಿದ್ದು, ಐದು ಪಂದ್ಯಗಳ ಟಿ 20 ಸರಣಿಯು ಆಗಸ್ಟ್ 3 ರಿಂದ ನಡೆಯಲಿದೆ.

Share This Article
Leave a comment