ರಾಮನಗರದಲ್ಲಿ ಡಿ ಕೆ ಸುರೇಶ್ ಬೆಂಬಲಿಗರಿಂದ ಹಲ್ಲೆ ಯತ್ನ ಹಾಗೂ ಗೂಂಡಾಗಿರಿ ಸಂಸ್ಕೃತಿಯಿಂದ ಬಂದವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ
ಮೈಸೂರಿನಲ್ಲಿ ರಾಮನಗರದ ಸಿಎಂ ಕಾರ್ಯಕ್ರಮದಲ್ಲಿ ನಡೆದ ಗಲಾಟೆ ಕುರಿತಂತೆ ಮಾತನಾಡಿದ ಕುಮಾರಸ್ವಾಮಿ, ಸಿಎಂ ಕಾರ್ಯಕ್ರಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಇಂತಹ ಜನಪ್ರತಿನಿಧಿಗಳಿಂದ ಜನರು ಹುಷಾರಾಗಿರಬೇಕು ಎಂದರು.
ಜನಪ್ರತಿನಿಧಿಗಳ ಈ ರೀತಿಯ ನಡುವಳಿಕೆ ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ಅವರು ಗೂಂಡಾಗಿರಿಯ ಸಂಸ್ಕೃತಿಯಿಂದ ಬಂದವರು ಇವರಿಂದ ಇದನ್ನ ಬಿಟ್ಟು ಬೇರೆ ಏನನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಮನಗರ ಇಷ್ಟು ದಿನ ಶಾಂತಿಯಿಂದ ಕೂಡಿತ್ತು. ಇವತ್ತು ಅಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳು ನಡೆದಿದೆ.
ಇವರು ಸರ್ಕಾರಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾರೆ ಅಂದ್ರೆ ತಾಳ್ಮೆ ಇರಬೇಕು. ಇವರ ಈ ನಡವಳಿಕೆ ಜನರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಅಶ್ವಥ್ ನಾರಾಯಣ್ ಅವರ ಪದ ಬಳಕೆ ಸರಿಯಾದುದಲ್ಲ. ಇವರನ್ನು ತುಂಬಾ ಹತ್ತಿರದಿಂದ ನೋಡಿದ್ದೇವೆ ಇವರದ್ದು ದಬ್ಬಾಳಿಕೆಯ ರಾಜಕೀಯ ಇವರ ಮೇಲೆ ಕಾನೂನಿನ ಪ್ರಕಾರ ಕೇಸ್ ದಾಖಲಿಸಬೇಕೆಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
More Stories
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು