February 19, 2026

Newsnap Kannada

The World at your finger tips!

cheluvaraya swamy

ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು ಸ್ವಾಮಿ ? ಮಂಡ್ಯ ಜಿಲ್ಲಾ ಮಂತ್ರಿ ಪ್ರಶ್ನೆ

Spread the love

ಮಂಡ್ಯ : ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿನ ಪ್ರದೇಶಗಳಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಅವರನ್ನು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳುತ್ತಾರೆ? ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ನೀರು ಹರಿಸುತ್ತಿರುವ ಬಗ್ಗೆ ಚಲುವರಾಯಸ್ವಾಮಿ, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ ಎಂದರು.

ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.ಮಹಿಷ ದಸರಾ ತಡೆಯಲು : ಚಲೋ ಚಾಮುಂಡಿ ಬೆಟ್ಟ ಜಾಥಾ:ಸಂಸದ ಪ್ರತಾಪ್ ಸಿಂಹ

ನಾವು ರೈತರ ಹಿತರಕ್ಷಣೆಗೆ ಬದ್ಧರಾಗಿದ್ದೇವೆ. ಆದೇಶ ಉಲ್ಲಂಘಿಸಿ ರೈತರನ್ನು ರಕ್ಷಿಸುತ್ತಿದ್ದೇವೆ, ನಮ್ಮ ಶಾಸಕರು, ಸಚಿವರು, ಸಿಎಂ,ಡಿಸಿಎಂ ಎಲ್ಲರು ರೈತರ ಹಿತ ಕಾಯಲು ಯತ್ನಿಸುತ್ತಿದ್ದೇವೆ ಎಂದಿದ್ದಾರೆ.

error: Content is protected !!