Categories: Main News

ನಾಳೆಯಿಂದ ರಾಜ್ಯದಲ್ಲಿ 14 ದಿನ ಕಠಿಣ ಲಾಕ್‍ಡೌನ್ – ಏನಿರುತ್ತೆ? ಏನಿರಲ್ಲ?

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜನತಾ ಲಾಕ್‍ಡೌನ್ ಬದಲಿಗೆ, ನಾಳೆಯಿಂದ (14 ದಿನಗಳ) ಕಾಲ ಮೇ 24ರವರೆಗೂ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ.

ನಾಳೆ ಬೆಳಗ್ಗೆ 6 ಗಂಟೆಯಿಂದ ಹೊಸ ಲಾಕ್‍ಡೌನ್ ನಿಯಮ ಜಾರಿಯಾಗುತ್ತೆ. ಈ ಬಾರಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧವಿದೆ. ಇನ್ನುಳಿದಂತೆ ಬಹುತೇಕ ನಿಯಮಗಳೆಲ್ಲಾ ಜನತಾ ಲಾಕ್‍ಡೌನ್‍ನ ಪಾರ್ಟ್ 1ರಿಂದ ಯಥಾವತ್ತಾಗಿ ನಕಲು ಮಾಡಲಾಗಿದೆ.

14 ದಿನ ಏನಿರುತ್ತೆ? ಏನಿರಲ್ಲ? ಎಂಬ ಮಾಹಿತಿ :

  • ಆಸ್ಪತ್ರೆ, ಮೆಡಿಕಲ್, ನ್ಯಾಯಬೆಲೆ ಅಂಗಡಿ * ಹಾಲು (ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ) * ಹಾಪ್‍ಕಾಮ್ಸ್, ಹಣ್ಣು-ತರಕಾರಿ ಬೆಳಗ್ಗೆ 10 ಗಂಟೆವರೆಗೆ ತಳ್ಳುಗಾಡಿಯಲ್ಲಿ ಹಣ್ಣು-ತರಕಾರಿ ಸಂಜೆ 6 ಗಂಟೆಯವರೆಗೆ ಮಾರಬಹುದು.
  • ದಿನಸಿ-ಮಾಂಸ (ಬೆಳಗ್ಗೆ 10 ಗಂಟೆವರೆಗೆ) * ಇಡೀ ದಿನ ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಇರುತ್ತೆ ಮತ್ತು ಹೋಂ ಡೆಲಿವರಿ * ಮದ್ಯ ಪಾರ್ಸೆಲ್ ಬೆಳಗ್ಗೆ 10 ಗಂಟೆವರೆಗೆ ಮಾತ್ರ
  • ಮನೆಯಲ್ಲಿ ಮಾತ್ರ ಮದುವೆ ನಡೆಸಬೇಕು. ಮದುವೆಯಲ್ಲಿ ಕೇವಲ 40 ಜನರಿಗಷ್ಟೇ ಭಾಗವಹಿಸಲು ಅವಕಾಶ.
  • ಅಂತ್ಯಸಂಸ್ಕಾರದಲ್ಲಿ 5ಕ್ಕಿಂತ ಜನರು ಭಾಗವಹಿಸುವಂತಿಲ್ಲ
  • ಆಹಾರ ಸಂಸ್ಕರಣಾ ಘಟಕ
  • ರೈಲು, ವಿಮಾನ ಸಂಚಾರ ಇರುತ್ತದೆ.

ಏನಿರಲ್ಲ?

ಅಂತರ್ ಜಿಲ್ಲಾ ಓಡಾಟ , ಖಾಸಗಿ ವಾಹನ ಸಂಚಾರ * ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್, ಮೆಟ್ರೋ, ಆಟೋ, ಟ್ಯಾಕ್ಸಿ * ಗಾರ್ಮೆಂಟ್ಸ್, ಕಾರ್ಖಾನೆ, ಖಾಸಗಿ ಕಂಪನಿ * ಮಾರುಕಟ್ಟೆಗಳು ಸಂಪೂರ್ಣ ಬಂದ್

  • ಅಗತ್ಯ ವಸ್ತು ಖರೀದಿಗೆ ಜನ ನಡೆದುಕೊಂಡೇ ಹೋಗಬೇಕು.
  • ಸಮೀಪದ ಅಂಗಡಿಗಳಲ್ಲಿ ದಿನ ಬಳಕೆ ವಸ್ತು ಖರೀದಿಸಬೇಕು.
  • ಹೋಟೆಲ್, ಬಾರ್ ನಲ್ಲಿ ಪಾರ್ಸೆಲ್ ಲಭ್ಯವಿರುತ್ತೆ.
  • ಆಟೋ, ಬೈಕ್, ಕಾರು ನಾಳೆ ರೋಡಿಗಿಳಿದ್ರೆ ಪೊಲೀಸರು ವಶಕ್ಕೆ ಪಡೆದುಕೊಳ್ಳೋದು ಬಹುತೇಕ ಖಚಿತ.
  • ಅನಗತ್ಯವಾಗಿ ಓಡಾಡಿದ್ರೆ ಲಾಠಿ ಏಟು ಬೀಳೋದು ಫಿಕ್ಸ್ ಅಥವಾ ಪೊಲೀಸರು ಬಂಧಿಸಲೂಬಹುದು.
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024