ಐಟಿ ಉದ್ಯೋಗಿಗಳಿಗೆ ಹೆಚ್ಚು ಅನುಕೂಲವಾಗಲಿರುವ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ನಮ್ಮ ಮೆಟ್ರೋ ಮಾರ್ಗವು ಈ ವರ್ಷಾಂತ್ಯಕ್ಕೆ ಸಾರ್ವಜನಿಕರ ಸೇವೆ ಲಭ್ಯವಾಗಲಿದೆ. ಈ ಮಾಹಿತಿಯನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಹಂಚಿಕೊಂಡಿದ್ದಾರೆ.
ಬೈಯಪ್ಪನಹಳ್ಳಿ – ವೈಟ್ ಪೀಲ್ಡ್ ನ ಮೆಟ್ರೋ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗವು ವಾಣಿಜ್ಯ ಕಾರ್ಯಾಚರಣೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
ಈ ಮಾರ್ಗ ಕಾರ್ಯಾರಂಭ ಮಾಡಿದರೆ ನಮ್ಮ ಮೆಟ್ರೋ ಸೇವೆಗೆ 2.5 ರಿಂದ 3 ಲಕ್ಷ ಹೆಚ್ಚುವರಿ ಪ್ರಯಾಣಿಕರು ಸೇರಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಒಟ್ಟು 15 ಕಿ. ಮೀ. ಉದ್ದದ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗದಲ್ಲಿ 13 ಮೆಟ್ರೋ ನಿಲ್ದಾಣಗಳಿವೆ. 44 ಎಕರೆ ಪ್ರದೇಶದಲ್ಲಿ ಕಾಡುಗೋಡಿಯಲ್ಲಿ ನಿಲ್ದಾಣ ನಿರ್ಮಾಣಗೊಂಡಿರುವುದು ವಿಶೇಷ. ಕಾರಿಡಾರ್ ನಲ್ಲಿರುವ ಮೆಟ್ರೋ ನಿಲ್ದಾಣಗಳು ಕೆ. ಆರ್. ಪುರಂ, ಹೂಡಿ ಜಂಕ್ಷನ್, ಕಾಡುಗೋಡಿ ಮತ್ತು ವೈಟ್‌ಫೀಲ್ಡ್. ಮೆಟ್ರೋ ನಿಲ್ದಾಣ, ಲೈನ್ ಗಳ ಕಾಮಗಾರಿ ಚುರುಕಿನಿಂದ ನಡೆಯುತ್ತಿದೆ.
ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗ ಕಾರ್ಯಾರಂಭವಾದ ಬಳಿಕ ಬಿಎಂಆರ್‌ಸಿಎಲ್ ಸೇವೆ ಗಮನಾರ್ಹವಾಗಿ ಹೆಚ್ಚಲಿದೆ. ಕಾರಣ ಈ ಮಾರ್ಗದ ಅಕ್ಕ ಪಕ್ಕ ಹಾಗೂ ಸಮೀಪ ಸಾಕಷ್ಟು ಐಟಿ ಕಂಪನಿಗಳು, ಕಾರ್ಖಾನೆಗಳಿವೆ. ಇದೊಂದು ಐಟಿ ಕಾರಿಡಾರ್ ಆಗಿದ್ದರಿಂದ ಇಲ್ಲಿ ಕೆಲಸ ಮಾಡುವ ಸಾವಿರಾರು ಉದ್ಯೋಗಿಗಳು ಈ ಮೆಟ್ರೋ ಮಾರ್ಗದ ಪ್ರಯೋಜನ ಪಡೆಯಲಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ