ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್‌ಫೀಲ್ಡ್ ಮೆಟ್ರೋ ಸೇವೆ ಆರಂಭ

Team Newsnap
1 Min Read
Application Invitation for Recruitment of Various 236 Posts in Our Metro ನಮ್ಮ ಮೆಟ್ರೋದಲ್ಲಿ ವಿವಿಧ 236 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿ ಉದ್ಯೋಗಿಗಳಿಗೆ ಹೆಚ್ಚು ಅನುಕೂಲವಾಗಲಿರುವ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ನಮ್ಮ ಮೆಟ್ರೋ ಮಾರ್ಗವು ಈ ವರ್ಷಾಂತ್ಯಕ್ಕೆ ಸಾರ್ವಜನಿಕರ ಸೇವೆ ಲಭ್ಯವಾಗಲಿದೆ. ಈ ಮಾಹಿತಿಯನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಹಂಚಿಕೊಂಡಿದ್ದಾರೆ.

ಬೈಯಪ್ಪನಹಳ್ಳಿ – ವೈಟ್ ಪೀಲ್ಡ್ ನ ಮೆಟ್ರೋ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗವು ವಾಣಿಜ್ಯ ಕಾರ್ಯಾಚರಣೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರ ಮಾಜಿ DC ಮಂಜುನಾಥ್​ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ

ಈ ಮಾರ್ಗ ಕಾರ್ಯಾರಂಭ ಮಾಡಿದರೆ ನಮ್ಮ ಮೆಟ್ರೋ ಸೇವೆಗೆ 2.5 ರಿಂದ 3 ಲಕ್ಷ ಹೆಚ್ಚುವರಿ ಪ್ರಯಾಣಿಕರು ಸೇರಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಒಟ್ಟು 15 ಕಿ. ಮೀ. ಉದ್ದದ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗದಲ್ಲಿ 13 ಮೆಟ್ರೋ ನಿಲ್ದಾಣಗಳಿವೆ. 44 ಎಕರೆ ಪ್ರದೇಶದಲ್ಲಿ ಕಾಡುಗೋಡಿಯಲ್ಲಿ ನಿಲ್ದಾಣ ನಿರ್ಮಾಣಗೊಂಡಿರುವುದು ವಿಶೇಷ. ಕಾರಿಡಾರ್ ನಲ್ಲಿರುವ ಮೆಟ್ರೋ ನಿಲ್ದಾಣಗಳು ಕೆ. ಆರ್. ಪುರಂ, ಹೂಡಿ ಜಂಕ್ಷನ್, ಕಾಡುಗೋಡಿ ಮತ್ತು ವೈಟ್‌ಫೀಲ್ಡ್. ಮೆಟ್ರೋ ನಿಲ್ದಾಣ, ಲೈನ್ ಗಳ ಕಾಮಗಾರಿ ಚುರುಕಿನಿಂದ ನಡೆಯುತ್ತಿದೆ.

ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗ ಕಾರ್ಯಾರಂಭವಾದ ಬಳಿಕ ಬಿಎಂಆರ್‌ಸಿಎಲ್ ಸೇವೆ ಗಮನಾರ್ಹವಾಗಿ ಹೆಚ್ಚಲಿದೆ. ಕಾರಣ ಈ ಮಾರ್ಗದ ಅಕ್ಕ ಪಕ್ಕ ಹಾಗೂ ಸಮೀಪ ಸಾಕಷ್ಟು ಐಟಿ ಕಂಪನಿಗಳು, ಕಾರ್ಖಾನೆಗಳಿವೆ. ಇದೊಂದು ಐಟಿ ಕಾರಿಡಾರ್ ಆಗಿದ್ದರಿಂದ ಇಲ್ಲಿ ಕೆಲಸ ಮಾಡುವ ಸಾವಿರಾರು ಉದ್ಯೋಗಿಗಳು ಈ ಮೆಟ್ರೋ ಮಾರ್ಗದ ಪ್ರಯೋಜನ ಪಡೆಯಲಿದ್ದಾರೆ.

Share This Article
Leave a comment