ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿದ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.
ಕೊರೋನಾ ವೈರಸ್ನಿಂದ ತಪ್ಪಿಸಿಕೊಳ್ಳಲು ಲಸಿಕೆ ಇಲ್ಲದ ದೇಶಗಳು ತುರ್ತಾಗಿ ಭಾರತದ ಕೋವ್ಯಾಕ್ಸಿನ್ ಬಳಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರು ಎಲ್ಲಾ ದೇಶಗಳಿಗೂ ಹೋಗಬಹುದು.
ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ಬಳಿಕ ಎಲ್ಲಾ ದೇಶಗಳು ಈಗ ಕೋವ್ಯಾಕ್ಸಿನ್ ಬಳಸಬಹುದು. ಕೊವಿಶೀಲ್ಡ್ ಜತೆ ಈಗ ಕೊವ್ಯಾಕ್ಸಿನ್ ಕೂಡ ವಿಶ್ವ ಅಧಿಕೃತ ಲಸಿಕೆಗಳ ಪಟ್ಟಿಗೆ ಸೇರಿದೆ.
ಭಾರತದ ಕೋವ್ಯಾಕ್ಸಿನ್ಗೆ ಅನುಮೋದನೆ ನೀಡಲು ವಿಶ್ವ ಆರೋಗ್ಯ ಸಂಸ್ಥೆ ತಕರಾರು ಮಾಡುತ್ತಲೇ. ಕೋವ್ಯಾಕ್ಸಿನ್ ಸಂಬಂಧ ಹಲವು ಡೀಟೈಲ್ಸ್ ನಮಗೆ ಸಿಕ್ಕಿಲ್ಲ ಎಂದು ಖ್ಯಾತೆ ತೆಗೆಯುತ್ತಿತ್ತು.
ಭಾರತ ಯಾವಾಗ ಇತರ ದೇಶಗಳಿಗೆ ಲಸಿಕೆ ನೀಡೋದಿಲ್ಲ ಎಂದು ಕೆಲವು ಕ್ರಮಗಳನ್ನು ತೆಗೆದುಕೊಂಡಿತೋ ಅಂದು ಮೋದಿ ಸರ್ಕಾರದ ಒತ್ತಡಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮಣಿದಿದೆ. ವಿಶ್ವ ಆರೋಗ್ಯ ಸಂಸ್ಥೆ ಕೊನೆಗೂ ಭಾರತ ಕೋವ್ಯಾಕ್ಸಿನ್ಗೆ ಅನುಮೋದನೆ ನೀಡಿದೆ. ಈ ಮುನ್ನ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ಕೋವ್ಯಾಕ್ಸಿನ್ ಅನುಮೋದಿಸಿದ್ದವು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು