March 12, 2026

Newsnap Kannada

The World at your finger tips!

DK

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

Spread the love

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ ಹೇಳಲು ಹೇಳಲು ಏಕೆ ಹೋಗಲಿಲ್ಲ ಎಂದು ಬಿಜೆಪಿ ಮುಖಂಡರನ್ನು ಪ್ರಶ್ನಿಸಿದ್ದಾರೆ.

ನೆನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಹೋದ ಸಿಟಿ ರವಿ, ಎಲ್ಲಿ ಹೋದ್ರು ಶೋಭಕ್ಕ, ಬೊಮ್ಮಾಯಿ, ಪ್ರಹ್ಲಾದ್ ಜೋಷಿ? ಹೆಣ್ಣು ಮಕ್ಕಳ ಮೇಲೆ ಅನ್ಯಾಯ ಆದರೂ ಯಾಕೆ ಮಾತಾಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಜ್ವಲ್ ರೇಪ್ ಕೇಸ್ ಬಗ್ಗೆ ಪೇಪರ್‌ನಲ್ಲಿ ನೋಡಿದ್ದೀನಿ. ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಅವರಿಗೆ ನಾವು ಫ್ರೀ ಹ್ಯಾಂಡ್ ಆಗಿ ಬಿಟ್ಟಿದ್ದೀವಿ, ಕುಮಾರಣ್ಣ ಕೂಡ ಫ್ರೀ ಹ್ಯಾಂಡ್ ಕೊಟ್ಟಿದ್ದಾರೆ. ಉಪ್ಪು ತಿಂದವರು ನೀರು ಕುಡಿಬೇಕು ಎಂದು ಕುಮಾರಣ್ಣ ಹೇಳಿದ್ದಾರೆ.ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬಿಜೆಪಿಯವರು ಸಹ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದು ,ನಾವು ಇದರಲ್ಲಿ ಮೂಗು ತೂರಿಸಲ್ಲ. ತನಿಖೆ ನಡೆದು ಎಲ್ಲ ಹೊರಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

error: Content is protected !!