ಬೆಂಗಳೂರು:10 ವರ್ಷದಿಂದ ಪ್ರತಾಪ್ ಸಿಂಹ ಅವರು ಸಂಸದರಾಗಿ ಕೆಲಸ ಮಾಡಿದ್ದಾರೆ. ಅವರು ಹಾಕಿಕೊಟ್ಟ ಅಡಿಪಾಯವನ್ನು ನಾನು ಮುಂದುವರಿಸುತ್ತೇನೆ ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಇಂದು ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಸಿಕ್ಕ ಬಳಿಕ ಬಿಜೆಪಿ ಕಚೇರಿಗೆ ಯದುವೀರ್ ಭೇಟಿ ನೀಡಿದ್ದು, ಕಾರ್ಯಕರ್ತರು ಆರತಿ ಬೆಳಗಿ ಸ್ವಾಗತಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ತುಂಬಾ ಸಂತೋಷ ಇದೆ. ಕಳೆದ ಒಂದು ವರ್ಷದಿಂದ ರಾಜಕೀಯ ಚರ್ಚೆ ನಡೆಯುತ್ತಾ ಇತ್ತು. ಈಗ ಅದರ ಅವಕಾಶ ಸಿಕ್ಕಿದೆ.
ಇಲ್ಲಿ ರಾಜ, ಸಾಮಾನ್ಯ ಜನ ಅನ್ನೋದಿಲ್ಲ ,ಇದು ಪ್ರಜಾಪ್ರಭುತ್ವದ ವ್ಯವಸ್ಥೆ . ಇಲ್ಲಿ ಎಲ್ಲರೂ ಒಂದೇ ಎಂದು ಅಭಿಪ್ರಾಯಪಟ್ಟರು.
ನನಗೆ ಪ್ರತಾಪ್ ಸಿಂಹ ಅವರ ಸಹಕಾರವಿದೆ , ಅವರ ಜೊತೆ ನಾನು ನಿರಂತರವಾಗಿ ಸಂಪರ್ಕದಲ್ಲಿ ಇದ್ದೀನಿ.
ಪ್ರತಾಪ್ ಸಿಂಹ ಮೈಸೂರಿನಲ್ಲಿ ಕಳೆದ 10 ವರ್ಷದಲ್ಲಿ ಉತ್ತಮ ಕೆಲಸ ಮಾಡಿ,ಅಭಿವೃದ್ಧಿಗೆ ಅಡಿಪಾಯ ಹಾಕಿದ್ದಾರೆ. 9 ವರ್ಷಗಳ ಕಾಲ ಅರಮನೆಯ ಜವಾಬ್ದಾರಿ ಹೊತ್ತು ಜನರ ಜೊತೆ ಬೆರೆತಿದ್ದೇನೆ. ಸಹೋದರನಂತೆ ನನ್ನನ್ನು ಪ್ರೀತಿಸಿದ್ದಾರೆ.
ಪ್ರತಾಪ್ ಸಿಂಹ ನನ್ನ ಜೊತೆ ಮಾತಾನಾಡುವಾಗ, ಬೆಂಬಲವಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.ವಿದೇಶಿ ಮಹಿಳೆ ಹೋಟೆಲ್ ರೂಮಿನಲ್ಲಿ ಶವವಾಗಿ ಪತ್ತೆ
ನನಗಿದು ಸಾರ್ವಜನಿಕರ ಸೇವೆಗೆ ಅವಕಾಶವಾಗಿದ್ದು ,ಅಧಿಕಾರವಿದ್ದರೆ ಅಭಿವೃದ್ಧಿ ಮಾಡಬಹುದು ಎಂದು ತಿಳಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು