ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಹಿನ್ನಲೆಯಲ್ಲಿ ಜಗನ್ ಎನ್‌ಡಿಎ ಮೈತ್ರಿಕೂಟ ಸೇರುವರೇ ಎಂಬ ನಿರೀಕ್ಷೆ ಎಲ್ಲರಲ್ಲೂ ಹುಟ್ಟು ಹಾಕಿದೆ.
15 ದಿನಗಳಲ್ಲಿ ಜಗನ್ ಎರಡನೇ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿರುವುದೂ ಕುತೂಹಲಕ್ಕೆ
ಕಾರಣವಾಗಿದೆ. ಕಳೆದ ಸೆಪ್ಟೆಂಬರ್‌ನ 23 ಹಾಗೂ 24ರಂದು ಜಗನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಮತ್ತೊಮ್ಮೆ ಮೋದಿಯವರನ್ನು ಭೇಟಿಯಾಗಲು ಜಗನ್ ಮೋಹನ್ ರೆಡ್ಡಿಯವರು ದೆಹಲಿಗೆ ಹೋಗುತ್ತಿದ್ದಾರೆ.
ಆಂಧ್ರ ಹಾಗೂ ತೆಲಂಗಾಣದ ಮಧ್ಯೆ ಕೃಷ್ಣಾ ನದಿ ನೀರು ಹಂಚಿಕೆ ವಿವಾದದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿರುವದರಿಂದ ಅದರ ವಿಚಾರಣೆಗೆ ಇಂದು ನೇರವಾಗಿ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ ಜಗನ್. ತೆಲಂಗಾಣದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ವಿಡಿಯೋ ಕಾನ್ಸರನ್ಸ್ ಕಾಲ್
ಮೂಲಕ ವಿಚಾರಣೆಗೆ ಹಾಜರಾಗುತ್ತಿದ್ದಾರೆ.
ಎನ್‌ಡಿಎ ಸರ್ಕಾರದಿಂದ ವೈಎಸ್‌ಆರ್ ಕಾಂಗ್ರೆಸ್‌ಗೆ ಒಂದು ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ಮತ್ತು ಎರಡು ರಾಜ್ಯ ಮಂತ್ರಿ ಸ್ಥಾನ ನೀಡುವ ಭರವಸೆ ಕೊಡಲಾಗಿದೆಯೆಂಬ ಮಾಹಿತಿಗಳು ಕೇಳಿ ಬರುತ್ತಿವೆ. 2019ರ ಚುಣಾವಣೆಯಲ್ಲಿ ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕೊಡಿಸುವ
ಆಶ್ವಾಸನೆ ನೀಡಿ ಜಗನ್ ಮುಖ್ಯಮಂತ್ರಿ ಗದ್ದುಗೆ ಏರಿದ್ದರು. ಈಗ ಆ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಜಗನ್ ಒಪ್ಪುತ್ತಿಲ್ಲ. ಈ ಎಲ್ಲ ಭರವಸೆಗಳನ್ನು ಈಡೇರಿಸಿದರೆ ಜಗನ್ ಎನ್‌ಡಿಎ ಮತ್ರಿಕೂಟ ಸೇರಬಹುದೆಂಬ ಸುದ್ದಿಗಳಿವೆ.
More Stories
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ