ಕಾಂಗ್ರೆಸ್ ಪಕ್ಷದಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
ಮುನಿರತ್ನ ಕಾಂಗ್ರೆಸ್ ಪಕ್ಷದಲ್ಲಿದ್ದಾಗ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದರು. ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಪಕ್ಷಾಂತರವಾಗಿದ್ದರು. ಈಗ ರಾಜಿ ರಾಜೇಶ್ವರಿ ನಗರದ ಉಪಚುಣಾವಣೆಯಲ್ಲಿ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ಭಾರೀ ನಿರೀಕ್ಷೆ ಇತ್ತು. ಆದರೆ ಈಗ ರಾಜ್ಯ ಬಿಜೆಪಿಯು ಆರ್‌ಆರ್ ನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜು ಹೆಸರನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಟಿಕೇಟ್ ಕೈ ತಪ್ಪುವ ಭೀತಿ ಎದುರಿಸುತ್ತಿರುವ ಮುನಿರತ್ನ ಜೆಡಿಎಸ್‌ಗೆ ಸೇರ್ಪಡೆ ಆಗುತ್ತಾರೆ
ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಒಂದು ವೇಳೆ ಬಿಜೆಪಿಯಿಂದ ಟಿಕಟ್ ತಪ್ಪಿದರೆ ಮುನಿರತ್ನ ಜೆಡಿಎಸ್‌ನಿಂದ ಕಣಕ್ಕಿಳಿಯುವುದು ನಿಶ್ಚಿತ ಎನ್ನುತ್ತಿವೆ ಮೂಲಗಳು.
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು