ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ, ನಮ್ಮೆಲ್ಲಾ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ನಮ್ಮ ಸರ್ಕಾರ ಇದ್ದಾಗ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್ಸಿಗರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ ಎಂದು ಎಚ್ಚರಿಸಿದರು
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕೆ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ. ಬೆಂಗಳೂರಿನಲ್ಲಿ ಲಿವಿಂಗ್ ಟುಗೇದರ್ ರಿಲೇಷನ್ ಶಿಪ್ ನಲ್ಲಿ ಪ್ರೇಮಿಗಳ ದುರಂತ ಸಾವು
ಇಡೀ ಜಗತ್ತೇ ಮೆಚ್ಚಿದ ಪ್ರಧಾನಿಯವರ ಬಗ್ಗೆ ಟೀಕೆ ಮಾಡುವಷ್ಟು ದುರಹಂಕಾರ ಇವರಿಗೆ ಬಂದಿದೆ. ಇದನ್ನು ಜನ ಮೆಚ್ಚುವುದಿಲ್ಲ, ಇವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು