ನವದೆಹಲಿ: ಅಂತ್ಯಸಂಸ್ಕಾರಕ್ಕೆ ಸಿದ್ದತೆ ನಡೆಸುವಾಗ ಕೊನೆ ಕ್ಷಣದಕಲ್ಲಿ ವೃದ್ಧೆ ಕಣ್ಣುಬಿಟ್ಟು ಕುಳಿತ ಘಟನೆ ಮಹಾರಾಷ್ಟ್ರ ದಲ್ಲಿ ಜರುಗಿದೆ.
ಶಾಕುಂತಲಾ(76) ಎಂಬ ವೃದ್ದೆ ಕೊರೊನಾಗೆ ಬಲಿಯಾಗಿದ್ದರು.
ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಮುಧಲೆ ಗ್ರಾಮದ ನಿವಾಸಿಯಾಗಿರುವ ಶಕುಂತಲಾ ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅವರಿಗೆ ಚಿಕಿತ್ಸೆ ನೀಡಿ ಆರೋಗ್ಯ ಸ್ಥಿತಿ ಹದಗೆಟ್ಟಾಗ ಬಾರಾಮತಿಗೆ ಕರೆದುಕೊಂಡು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಶಾಕುಂತಲಾ ಪ್ರಜ್ಞೆತಪ್ಪಿದ್ದರು.
ಇದನ್ನು ಅರಿಯದ ಕುಟುಂಬಸ್ಥರು ಶಾಕುಂತಲಾ ಸಾವನ್ನಪ್ಪಿದಳು ಎಂದು ಗ್ರಾಮದವರಿಗೆ ತಿಳಿಸಿದರು. ಅದರಂತೆ ಗ್ರಾಮದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ನಡೆಸಲು ಸೂಚಿಸಿದ್ದರು.
ಆದರೆ ಶಕುಂತಲಾ ಏಕಾಏಕಿ ಕಣ್ಣು ಬಿಟ್ಟು ಎದ್ದು ಕುಳಿತು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರು ಶಕುಂತಲಾ ಎದ್ದು ಕುಳಿತಿರುವುದನ್ನು ಆಶ್ಚರ್ಯ ಪಟ್ಟಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು. ಈಗ ಆ ವೃದ್ದೆ
ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ