November 27, 2021

Newsnap Kannada

The World at your finger tips!

ಕೊಯಮತ್ತೂರಿನಲ್ಲಿ ದುರಂತ :ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕ ಬಂಧನ

Spread the love

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಭೌತಶಾಸ್ತ್ರ ಶಿಕ್ಷಕನನ್ನು ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರು.

ಆಕೆ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ ಕ್ರಮಕೈಗೊಳ್ಳದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನೂ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ಕಾನೂನಿನಡಿಯಲ್ಲಿ ಬಂಧಿಸಿದ್ದಾರೆ. ಈ ಕೃತ್ಯದಲ್ಲಿ ಇನ್ನಿಬ್ಬರು ಭಾಗಿಯಾಗಿರುವ ಬಗ್ಗೆ ಕೈಬರಹದ ಟಿಪ್ಪಣಿಯನ್ನು ಪರಿಶೀಲಿಸಿದಾಗ ಪೊಲೀಸರಿಗೆ ತಿಳಿದಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಈ ವರ್ಷದ ಮೊದಲಾರ್ಧದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವಂತೆ ತೋರುತ್ತಿದೆ. ಶಿಕ್ಷಕರ ವಾಟ್ಸಾಪ್ ಚಾಟ್‍ನ ಆಡಿಯೊ ಸಂಭಾಷಣೆ ವೈರಲ್ ಆದ ಬಳಿಕ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

error: Content is protected !!